ನೌಕರರಿಗೆ ಸೆಟಲ್ ಮೆಂಟ್ ಮಾಡದ ಕಾರ್ಖಾನೆ… ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಬೆದರಿಕೆ…

ನೌಕರರಿಗೆ ಸೆಟಲ್ ಮೆಂಟ್ ಮಾಡದ ಕಾರ್ಖಾನೆ… ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಬೆದರಿಕೆ…

ನಂಜನಗೂಡು,ಆ28,Tv10 ಕನ್ನಡ

22 ವರ್ಷಗಳಿಂದ ಕೆಲಸ ಮಾಡಿದ ಇಬ್ಬರು ನೌಕರರಿಗೆ ಸೆಟಲ್ ಮೆಂಟ್ ಮಾಡಲು ವಿಳಂಬ ಧೋರಣೆ ತೋರಿದ ಕಾರ್ಖಾನೆ ವಿರುದ್ದ ಆಕ್ರೋಷ ವ್ಯಕ್ತವಾಗಿಧ. ಕಾರ್ಖಾನೆ ಮುಂದೆ ಪೆಟ್ರೋಲ್ ತುಂಬಿರುವ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ.
ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ನ್ಯೂ ಹಾರಿಜನ್ ಕಾರ್ಖಾನೆ ಮುಂಭಾಗ ಪ್ರತಿಭಟನೆಗೆ ಇಳಿದಿದ್ದಾರೆ.ಸೆಟಲ್ ಮೆಂಟ್ ಮಾಡದಿದ್ದಲ್ಲಿ ಆತ್ಮಹತ್ಯೆಯೇ ದಾರಿ ಎಂದು ನೋವನ್ನ ವ್ಯಕ್ತಪಡಿಸಿದ್ದಾರೆ.
ನಮ್ಮ ಸಾವಿಗೆ ಕಾರ್ಖಾನೆಯ ಮಾಲೀಕರೇ ಹೊಣೆಗಾರರು ಎಂದು ಆರೋಪಿಸಿದ್ದಾರೆ. ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಸುರೇಶ್ ಮತ್ತು ನಾಗಣ್ಣ ಪೆಟ್ರೋಲ್ ಬಾಟಲಿ ಹಿಡಿದು ಆತ್ಮಹತ್ಯೆಗೆ ನಿರ್ಧರಿಸಿರುವ ಕಾರ್ಮಿಕರು. ಶಾಸಕ ದರ್ಶನ್ ಧ್ರುವನಾರಾಯಣ್ ರವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.ಕಳೆದ 22 ವರ್ಷಗಳಿಂದ ದಿನಗೂಲಿ ನೌಕರರಾಗಿ ದುಡಿದಿರುವ ಇಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿ ಇಲ್ಲದಿದ್ದಲ್ಲಿ ಸೆಟಲ್ ಮೆಂಟ್ ಮಾಡಿಕೊಳ್ಳುವಂತೆ ಆಡಳಿತಮಂಡಳಿ ಸೂಚಿಸಿದೆ. ಆಡಳಿತ ಮಂಡಳಿಯ ಸೂಚನೆಯಂತೆ ಸೆಟಲ್ ಮೆಂಟ್ ಮಾಡದೆ ಸತಾಯಿಸುತ್ತಿರುವ ಹಿನ್ನಲೆ ಬೇಸತ್ತ ನೌಕರರಿಬ್ಬರು ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *