ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *