ಧರ್ಮದ ಉಳಿವಿಗೆ ಭಗವಂತನ ಅವತಾರ ನಿಶ್ಚಿತ…ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮೈಸೂರು,ಸೆ8,Tv10 ಕನ್ನಡ

ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆಗೆ ಯುಗಯುಗಗಳಲ್ಲೂ ಅವತಾರ ಎತ್ತಿ ಬರುತ್ತೇನೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ಮಾತು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ಧರ್ಮದ ಉಳಿವಿಗೆ ಭಗವಂತನ ಅವತಾರ ಬೇರೆ ಬೇರೆ ರೂಪದಲ್ಲಿ ಆಗುತ್ತಲೇ ಇರುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆ ಆರ್ ಮೊಹಲ್ಲಾದ ನಾಲಾ ಬೀದಿಯಲ್ಲಿರುವ ವೈಷ್ಣವಿ ಸೇವಾ ಪರಿಷತ್ ಹಮ್ಮಿಕೊಂಡಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದೇವರಿಗೆ ಸಮರ್ಪಿಸಲು ವಿವಿಧ ಭಕ್ಷ್ಯಗಳನ್ನು ಸಿದ್ಧಪಡಿಸಲಾಯಿತು.ವಿಶೇಷ ಪೂಜೆ ನಂತರ ಗೋಪೂಜೆ ಸಲ್ಲಿಸಿ ಮಾತನಾಡಿ ಶ್ರೀಗಳು
ಯುವಕರು ಧರ್ಮದ ಹಾದಿಯಲ್ಲಿ ನಡೆಯಬೇಕು. ಧರ್ಮಕ್ಕೆ ಆಪತ್ತು ಎದುರಾದಲ್ಲಿ ರಕ್ಷಣೆಗೂ ಸಿದ್ಧರಿರಬೇಕು ಎಂದು ಕರೆ ನೀಡಿದರು.
ಶ್ರೀಕೃಷ್ಣ ಆರಾಧ್ಯ ದೈವ. ಪಶುಪಾಲನೆ ವೃತ್ತಿ ಮಾಡುವ ಗೊಲ್ಲ ಜನಾಂಗದವರಿಗೆ ಗೋಪಾಲಕ ಎಂದು ಖ್ಯಾತಿ ಪಡೆದಿರುವ ಕೃಷ್ಣನೇ ಮುಖ್ಯದೇವರು. ಕೃಷ್ಣನಷ್ಟು ಕಷ್ಟಗಳನ್ನು ಎದುರಿಸಿದವರು ಮತ್ತೊಬ್ಬರು ಇರಲಾರರು. ತನಗೆ ಎದುರಾದ ಎಲ್ಲ ಕಷ್ಟಗಳನ್ನು ನಗುತ್ತಲೇ ಎದುರಿಸಿ ಜಗತ್ತಿಗೆ ಮಾದರಿಯಾದ ದೈವ. ಬೇರೆ ಧರ್ಮಗಳನ್ನು ಗೌರವಿಸೋಣ. ನಮ್ಮ ಧರ್ಮದ ಉನ್ನತಿಗೆ ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಈ ವೇಳೆ ವೆಂಗಿಪುರ ಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ವೈಷ್ಣವಿ ಸೇವಾ ಪರಿಷತ್ ಅಧ್ಯಕ್ಷರಾದ ಚಕ್ರಪಾಣಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಪುಷ್ಪ ಅಯ್ಯಂಗಾರ್ , ವೈದೇಹಿ, ಸುಚಿಂದ್ರ, ಚಿತ್ರ, ನಾಗಶ್ರೀ, ವಿದ್ಯಾ, ಮುರುಳಿಧರ್ , ಗೀತ, ಜಗದೀಶ್, ಮಧುಸೂದನ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *