
ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ…ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ…
- TV10 Kannada Exclusive
- September 26, 2023
- No Comment
- 201
ಮೈಸೂರು,ಸೆ26,Tv10 ಕನ್ನಡ
ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಇಡೀ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ 10 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ
ಬಳಿಕ ಮೈಸೂರು ತಾಲೂಕಿನ ಉತ್ತನಹಳ್ಳಿ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಉತ್ತನಹಳ್ಳಿ ಮಾರಮ್ಮ ದೇವಸ್ಥಾನಕ್ಕೆ ಭೇಟಿ
ನಂತರ ಡಾ.ಅಂಬೇಡ್ಕರ್ ಭವನ ಉದ್ಘಾಟನೆ,ಕನಕದಾಸ ಪುತ್ಥಳಿ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬಳಿಕ ಪಶುಪಾಲ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಸಂಜೆ 4 ಗಂಟೆಗೆ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 37 ನೇ ತಂಡದ ಪ್ರೋಬೆಷನರಿ ಪೊಲೀಸ್ ಉಪಾಧೀಕ್ಷರ,ಅಬಕಾರಿ ಉಪಾಧೀಕ್ಷರ ನಿರ್ಗಮನ ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಸಂಜೆ 5:30 ಕ್ಕೆ ಚಾಮರಾಜನಗರಕ್ಕೆ ತೆರಳಲಿದ್ದಾರೆ…