ಕಪಿಲಾ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ…
- CrimeMysore
- September 30, 2023
- No Comment
- 537
ನಂಜನಗೂಡು,ಸೆ30,Tv10 ಕನ್ನಡ
ಕಪಿಲಾ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ ಮಾಡಿಕೊಂಡ ಘಟನೆ
ನಂಜನಗೂಡಿನ ಹೆಜ್ಜೆಗೆ ಸೇತುವೆಯ ಬಳಿ ನಡೆದಿದೆ.
ನಾಗರತ್ನಮ್ಮ (63) ಆತ್ಮಹತ್ಯೆ ಮಾಡಿಕೊಂಡ ವೃದ್ದೆ.
ಮೈಸೂರಿನ ರಾಘವೇಂದ್ರ ನಗರದ ನಿವಾಸಿ.
ಸೆಪ್ಟೆಂಬರ್ 27 ರಂದು ಮನೆಯಿಂದ ನಾಪತ್ತೆಯಾಗಿದ್ದ ನಾಗರತ್ನಮ್ಮ.
ಈ ಬಗ್ಗೆ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ಪ್ರಕರಣ ದಾಖಲಾಗಿತ್ತು. ನಿನ್ನೆ ಸಂಜೆ ನಂಜನಗೂಡಿನ ಹೆಜ್ಜಿಗೆ ಗ್ರಾಮದ ಸೇತುವೆ ಬಳಿ ಹಾದು ಹೋಗಿರುವ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯರು ನಂಜನಗೂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಹಾಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…