ದಸರಾ ಹಿನ್ನಲೆ…
ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ತಾತ್ಕಾಲಿಕ ಬ್ರೇಕ್…
- TV10 Kannada Exclusive
- October 9, 2023
- No Comment
- 363

ಮೈಸೂರು,ಅ9,Tv10 ಕನ್ನಡ
ವಿಶ್ವವಿಖ್ಯಾತ ಮೈಸೂರು ದಸರಾ 2023 ಹಿನ್ನಲೆ
ಮೈಸೂರು ಅರಮನೆ ಆವರಣದಲ್ಲಿ ಸಂಜೆ ವೇಳೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ದಿನಾಂಕ 09/10/2023 ರಿಂದ 31/10/2023 ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ದಸರಾ ಮಹೋತ್ಸವದ ಪೂರ್ವಬಾವಿ ಕೆಲಸ ಹಿನ್ನೆಲೆ ರದ್ದುಪಡಿಸಲಾಗಿದೆ.
ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಿನ್ನಲೆ ಸಿದ್ದತೆ ನಡೆಸುವ ಅಂಗವಾಗಿ
ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು
ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಆದೇಶಿಸಿದ್ದಾರೆ…