ಸಾಂಪ್ರದಾಯಿಕ ಹೆಸರಲ್ಲಿ ಅದ್ದೂರಿ ದಸರಾ ಬೇಡ…ರೈತ ಮುಖಂಡ ಕುರುಬೂರು ಶಾಂತಕುಮಾರ್…

ಮೈಸೂರು,ಅ9,Tv10 ಕನ್ನಡ

ಸಾಂಪ್ರದಾಯಿಕ ದಸರಾ ಹೆಸರಿನಲ್ಲಿ ಅದ್ದೂರಿ ದಸರಾ ನಡೆಸುವುದು ಬೇಡ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಮಳೆ, ಬೆಳೆ ಇಲ್ಲದೆ ಬರದ ಕಾರ್ಮೋಡ ಮೂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂರಾರು ತಾಲೂಕುಗಳು ಬರಪೀಡಿತ ಪ್ರದೇಶವಾಗಿ ಲಕ್ಷಾಂತರ ರೈತರು ಬೆಳೆ ಇಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿ. ದಸರಾ ಮಹೋತ್ಸವದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಲಂಕರಿಸಿ ಝಗಮಗಿಸಿದರೆ ರೈತನ ನೋವು ನಿವಾರಣೆಯಾಗುವುದಿಲ್ಲ. ಮೈಸೂರು ನಗರ ಹೊರತುಪಡಿಸಿ ಎಲ್ಲಾ ತಾಲೂಕುಗಳು ಮಂಡ್ಯ ಚಾಮರಾಜನಗರ ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಬರಪೀಡಿತವಾಗಿದೆ. ಮೈಸೂರಿನ ನಗರದಲ್ಲಿ ವಿದ್ಯುತ್ ದೀಪಾಲಂಕರ ಮಾಡಿ ಹಾಗೂ ಯುವ ದಸಾ ಹೆಸರಿನಲ್ಲಿ ಹೊರರಾಜ್ಯದ ಕಲಾವಿದರನ್ನು ತರಿಸಿ ಕೇಕೆಹಾಕಿ ಅವರಿಗೆ ಲಕ್ಷಾಂತರ ನೀಡಿ ನಮ್ಮ ರೈತರಿಗೆ ಅವಮಾನ ಮಾಡಬೇಡಿ. ಹುಲಿ ಚಿರತೆಗಳ ದಾಳಿಯಿಂದ ರೈತರ ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ನಮ್ಮ ರೈತರ ನೋವಿಗೆ ಸ್ಪಂದಿಸಬೇಕಾದರೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಾತ್ರ ನಡೆಸಲಿ. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವವಾಗಬೇಕು. ದಸರಾ ಮಹೋತ್ಸವದಲ್ಲಿ ರೈತ ದಸರಾ ಸೇರಿದಂತೆ ವಿವಿಧ ಉತ್ಸವಗಳು ಸರಳವಾಗಿ ನಡೆಯಲಿ. ನವರಾತ್ರಿ ಉತ್ಸವ ಸರಳವಾಗಿ ಆಚರಿಸಿ ಚಾಮುಂಡೇಶ್ವರಿ ದೇವಿಗೆ ಪೂಜಾ ಕೈಂಕರ್ಯಗಳು ನಡೆದು ಸಕಾಲಕ್ಕೆ ಮಳೆ ಬೆಳೆ ಬಂದು ರೈತರು ಸಮೃದ್ಧಿಯಾಗಿ ಬೆಳೆ ಬೆಳೆಯುವಂತಾಗಲಿ. ಸರ್ಕಾರ ಈಗಲಾದರೂ ಎಚ್ಚೆತ್ತು ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಹೋತ್ಸವ ನಡೆಸಲಿ ಎಂದು
ಕುರುಬೂರು ಶಾಂತಕುಮಾರ್ ಸಲಹೆ ನೀಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *