ದಸರಾ 2023:ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ…
- TV10 Kannada Exclusive
- October 11, 2023
- No Comment
- 331

ಮೈಸೂರು,ಅ11,Tv10 ಕನ್ನಡ
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ರವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.
ಮೈಸೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.
ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು…