ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಬಾಗಿಲು ಮೀಟಿ ಕಳುವು ಮಾಡುತ್ತಿದ್ದ ಖತರ್ ನಾಕ್ ಕಳ್ಳನ ಬಂಧನ…

  • Crime
  • October 12, 2023
  • No Comment
  • 717

ಮೈಸೂರು,ಅ12,Tv10 ಕನ್ನಡ

ಮನೆ ಬಾಗಿಲು ಮೀಟಿ ಕನ್ನ ಕಳುವು ಮಾಡುತ್ತಿದ್ದ ಕತರ್ ನಾಕ್ ಕಳ್ಳನನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 1.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳನ್ನ ವಶಪಡಿಸಿಕೊಂಡಿದ್ದಾರೆ.ಅಲ್ಲದೆ ಕಳ್ಳತನದ ಹಣದಲ್ಲಿ ಖರೀದಿಸಿದ್ದ ಟಾಟಾ ಗೂಡ್ಸ್ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ.ಯೆರಗನಹಳ್ಳಿ ನಿವಾಸಿ ಕೃಷ್ಣಮೂರ್ತಿ(35) ಬಂಧಿತ ಆರೋಪಿ.ಈ ಹಿಂದೆ ಆರೋಪಿ ಕೃಷ್ಣಮೂರ್ತಿ ಶ್ರೀರಾಂಪುರ ಬಡಾವಣೆಯ ಎಸ್.ಬಿ.ಎಂ.ಕಾಲೋನಿಯಲ್ಲಿರುವ ನಂಜುಂಡಸ್ವಾಮಿ ಎಂಬುವರಿಗೆ ಸೇರಿದ ಮನೆ ಬಾಗಿಲು ಮೀಟಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.ಈ ಕುರಿತಂತೆ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಕಾರ್ಯೋನ್ಮುಖರಾದ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.ಕುವೆಂಪುನಗರ ಠಾಣೆಯ ಎರಡು ಕನ್ನಕಳುವು ಪ್ರಕರಣ ಹಾಗೂ ಮೇಟಗಳ್ಳಿ ಠಾಣೆಯ ಎರಡು ಕನ್ನಕಳುವು ಪ್ರಕರಣ ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೆ.ಆರ್.ವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ನಿರೀಕ್ಷಕರಾದ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಗೋಪಾಲ್ ಹಾಗೂ ರಾಧಾ ಮತ್ತು ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಹಜರತ್ ಆಲಿ,ಪುಟ್ಟಪ್ಪ,ಸುರೇಶ್ ಹಾಗೂ ನಾಗೇಶ್ ರವರು ಆರೋಪಿಯನ್ನ ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಾಚರಣೆಯನ್ನ ಡಿಸಿಪಿ ಮುತ್ತುರಾಜ್ ಹಾಗೂ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ರವರು ಪ್ರಶಂಸಿಸಿರುತ್ತಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *