ನಗರಪಾಲಿಕೆ ಅಧಿಕಾರಿಗಳ ಕಾರ್ಯಾಚರಣೆ…ಲಕ್ಷಾಂತರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶ…
- TV10 Kannada Exclusive
- October 12, 2023
- No Comment
- 331

ಮೈಸೂರು,ಅ12,Tv10 ಕನ್ನಡ

ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಮಳಿಗೆ ಹಾಗೂ ಗೊಡೌನ್ ಗಳ ಮೇಲೆ ದಾಳಿ ನಡೆಸಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಪದಾರ್ಥಗಳನ್ನ ವಶಪಡಿಸಿಕೊಂಡಿದ್ದಾರೆ.ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ರಮೇಶ್ ಏಜೆನ್ಸಿ,ಭಾಗ್ಯಲಕ್ಷ್ಮಿ ಏಜೆನ್ಸಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ ಅಧಿಕಾರಿಗಳು 9734 ಕೆಜಿ ನಿಷೇಧಿತ ಪ್ಲಾಸ್ಟಿಕ್ ಪದಾರ್ಥಗಳನ್ನ ವಶಪಡಿಸಿಕೊಂಡಿದ್ದಾರೆ.ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಸಮ್ಮುಖದಲ್ಲೇ ಕಾರ್ಯಾಚರಣೆ ನಡೆದಿದೆ.ಕಾರ್ಯಾಚರಣೆ ವೇಳೆ ಸ್ಥಳೀಯ ಕಾರ್ಪೊರೇಟರ್ ಪ್ರಮೀಳಾ ಹಾಗೂ ಮಾಜಿ ಕಾರ್ಪೊರೇಟರ್ ಪ್ರಶಾಂತ್ ಗೌಡ ಆಗಮಿಸಿ ಅಧಿಕಾರಿಗಳ ಕಾರ್ಯಾಚರಣೆಯನ್ನ ಪ್ರಶ್ನಿಸಿದರು.ರಾಜಕಾರಿಣಿಗಳು ಬಳಸುತ್ತಿರುವ ಫ್ಲೆಕ್ಸ್ ಗಳ ಮೇಲೆ ಕ್ರಮ ತೆಗೆದುಕೊಳ್ಳದೆ ವ್ಯಾಪಾರಸ್ಥರ ಮೇಲೆ ಕ್ರಮ ಕೈಗೊಳ್ಳುತ್ತಿದ್ದೀರ.ಅಲ್ಲದೆ ನಿಷೇಧಿತ ಪ್ಕಾಸ್ಟಿಕ್ ಉತ್ಪಾದಿಸುವ ಕಾರ್ಖಾನೆಗಳ ಮೇಲೂ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ದಾಳಿಯನ್ನ ಖಂಡಿಸಿದರು.ಈ ವೇಳೆ ಆಗಮಿಸಿದ ಶಾಸಕ ಹರೀಶ್ ಗೌಡ ಕಾರ್ಯಾಚರಣೆಗೆ ಬೆಂಬಲ ನೀಡಿದರು.ದಾಳಿಯಲ್ಲಿ ಪಾಲಿಕೆ ಆರೋಗ್ಯ ಅಧಿಕಾರಿಗಳು,ಪರಿಸರ ಇಂಜಿನಿಯರ್ ಗಳು ಭಾಗವಹಿಸಿದ್ದರು.ದೇವರಾಜ ಠಾಣೆ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಯಿತು…