ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು,ಅ13,Tv10 ಕನ್ನಡ

ಎರಡು ಬಸ್ ಹಾಗೂ ಒಂದು ಕಾರ್ ನಡುವೆ ನಡೆದ ಅಪಘಾತದಲ್ಲಿ 15 ಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ದಸರಾ ಲೈಟಿಂಗ್ ಹಾಕಲು ಅಳವಡಿಸಲಾಗಿದ್ದ ಕಮಾನಿಗೆ ಢಿಕ್ಕಿ ಹೊಡೆದಿದೆ.ಕಬ್ಬಿಣದ ಕಮಾನು ಬಸ್ ಮೇಲೆ ಉರುಳಿ ಬಿದ್ದಿದೆ.

ಇಂದು ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಘಟನೆ ನಡೆದಿದೆ.ಮೈಸೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಸೇಲಂ ನಿಂದ ಮೈಸೂರಿನತ್ತ ಬರುತ್ತಿದ್ದ ತಮಿಳುನಾಡಿನ ಬಸ್ ಗೆ ಢಿಕ್ಕಿ ಹೊಡೆದಿದೆ.ಈ ಮಧ್ಯೆ ಸಾಗುತ್ತಿದ್ದ ಇನೋವಾ ಕಾರ್ ಸಿಲುಕಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮೂರು ವಾಹನಗಳೂ ನಜ್ಜುಗುಜ್ಜಾಗಿದೆ.ಮೂರು ವಾಹನಗಳ ಪೈಕಿ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.ಅಪಘಾತದ ಪರಿಣಾಮ ಕೆಲ ಸಮಯ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.ಎನ್.ಆರ್.ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ.ಬಸ್ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *