ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ.

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ.

ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಚಾಲನೆ ನೀಡಿದರು

ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಮೆರವಣಿಗೆಯಲ್ಲಿ ತಾಯಿ ಚಾಮುಂಡೇಶ್ವರಿ ಅಂಬಾರಿ ಹೊತ್ತು ಮಹೇಂದ್ರ ಮುಂದೆ ಸಾಗಿತು. ವರಲಕ್ಷ್ಮೀ ಹಾಗೂ ವಿಜಯ ಜೊತೆಗೆ ಹೆಜ್ಜೆ ಹಾಕಿತು

ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್, ಅಶ್ವದಳ, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ಕಂಸಾಳೆ, ಡೊಳ್ಳು ಕುಣಿತ, ಸೋಮನ ಕುಣಿತ, ಒನಕೆ ಕುಣಿತ, ರಂಗದ ಕುಣಿತ, ಕೋಳಿ ನೃತ್ಯ, ಕಹಳೆ, ನಾಸಿಕ್ ಡೋಲ್, ದೊಡ್ಡ ಆಂಜನೇಯ, ಪಟ್ಟದ ಕುಣಿತ, ಯಕ್ಷಗಾನ ನೃತ್ಯ, ಹುಲಿವೇಷ, ಹಾಲಕ್ಕಿ ಸುಗ್ಗಿ ಕುಣಿತ, ಕೇರಳ ಚಂಡೆ, ಜಗ್ಗಲಿಗೆ, ಮಹಿಳಾ ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿ ವಿಶೇಷ ಮೆರಗು ನೀಡಿತು

ಸ್ಥಬ್ದ ಚಿತ್ರಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷಿ ಯೋಜನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಸ್ಥಬ್ದ ಚಿತ್ರ, ಅರೋಗ್ಯ ಇಲಾಖೆ ವತಿಯಿಂದ ಹೃದಯಘಾತ ತ್ವರಿತ ಚಿಕಿತ್ಸೆಗೆ ಸ್ಟೆಮಿ ಯೋಜನೆ ಕುರಿತು ಸ್ಥಬ್ದ ಚಿತ್ರ, ರೇಷ್ಮೆ ಇಲಾಖೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಸ್ಥಬ್ದ ಚಿತ್ರ ಪ್ರದರ್ಶಿಸಲಾಯಿತು

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *