ದಸರಾ 2023:ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ

ಮೈಸೂರು,ಅ17,Tv10 ಕನ್ನಡ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಕ್ಕಳಿಗಾಗಿ ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಗೆ ಟೆಪ್ ಕತ್ತರಿಸುವುದರ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ.ಮಹದೇವಪ್ಪ ಅವರು ಕಲಾಮಂದಿರದಲ್ಲಿ ಉದ್ಘಾಟಿಸಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟಾರೆ 325 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ 1ರಿಂದ 4ನೇ ತರಗತಿ ವಿದ್ಯಾರ್ಥಿಗಳು 110 ಜನ ಭಾಗವಹಿಸಿದ್ದು, ಮತ್ತು 5ರಿಂದ 7ನೇ ತರಗತಿ ವಿದ್ಯಾರ್ಥಿಗಳು 111 ಜನ ಭಾಗವಹಿಸಿದ್ದು, 8ರಿಂದ 10ನೇ ತರಗತಿ ವಿದ್ಯಾರ್ಥಿಗಳು 104 ಜನ ಭಾಗವಹಿಸಿದ್ದಾರೆ.

1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಸರ, ಪ್ರಾಣಿ, ಪಕ್ಷಿಗಳು,ಮೈಸೂರು ದಸರಾದ, ವಿಷಯ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಮೈಲುಗಲ್ಲು ವಿಷಯದ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ವಿಶ್ವ ಪಾರಂಪರಿಕ ತಾಣಗಳ ವಿಷಯ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಚಿತ್ರಕಲೆ ಸಭೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು 22 ರಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *