ಮೈಸೂರು ವಿವಿ 103ನೇ ಘಟಿಕೋತ್ಸವ…32,240 ಅಭ್ಯರ್ಥಿಗಳಿಗೆ ಪದವಿ ಪ್ರಧಾನ

ಮೈಸೂರು ವಿವಿ 103ನೇ ಘಟಿಕೋತ್ಸವ…32,240 ಅಭ್ಯರ್ಥಿಗಳಿಗೆ ಪದವಿ ಪ್ರಧಾನ…

ಮೈಸೂರು,ಅ18,Tv10 ಕನ್ನಡ

ಮೈಸೂರು ವಿಶ್ವವಿದ್ಯಾನಿಲಯದ 103 ನೇ ಘಟಿಕೋತ್ಸವದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್.ಶಂಕರ್, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರಿಗೆ ಗೌರವ ಡಾಕ್ಟರೆಟ್ ಸೇರಿದಂತೆ ಪಿಎಚ್.ಡಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಒಟ್ಟು 32,240 ಅಭ್ಯರ್ಥಿಗಳಿಗೆ ಪದವಿಗಳನ್ನು ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಅವರು ಪ್ರಧಾನ ಮಾಡಿದರು.

ಪದವಿ ಪಡೆಯುತ್ತಿರುವ ಒಟ್ಟು 32,240 ಅಭ್ಯರ್ಥಿಗಳ ಪೈಕಿ 12,051 (ಶೇ.37.37) ಪುರುಷ ಅಭ್ಯರ್ಥಿಗಳಾದರೆ, 20,189 (ಶೆ.62.62) ಮಹಿಳಾ ಅಭ್ಯರ್ಥಿಗಳಿದ್ದರು. ಈ ಬಾರಿ ಘಟಿಕೋತ್ಸವದಲ್ಲಿ ಮಹಿಳೆಯರೆ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಪದವಿಗಳನ್ನು ಪಡೆಯುತ್ತಿದ್ದಾರೆ. ವಿವಿಧ ವಿಷಯಗಳಲ್ಲಿ 539 ಅಭ್ಯರ್ಥಿಗಳು ಪಿಎಚ್.ಡಿ ಪದವಿ ಪಡೆಯುತ್ತಿದ್ದಾರೆ. ಈ ಪೈಕಿ248 (ಶೇ.46.01) ಮಹಿಳಾ ಅಭ್ಯರ್ಥಿಗಳಿದ್ದರೆ, 291 ಮಂದಿ (ಶೆ.53.98) ಪುರುಷ ಅಭ್ಯರ್ಥಿಗಳಿದ್ದಾರೆ.

ಪದವಿ ಪಡೆಯುತ್ತಿರುವ ಅಭ್ಯರ್ಥಿಗಳಲ್ಲಿ 40 ಮಂದಿ ವಿದೇಶಿ ಅಭ್ಯರ್ಥಿಗಳಿದ್ದರು. ಹಾಗೆಯೇ 420 ಚಿನ್ನದ ಪದಕ, 275 ನಗದು ಬಹುಮಾನಗಳನ್ನು 249 ಅಭ್ಯರ್ಥಿಗಳು ಪಡೆದುಕೊಂಡರೆ, ಅದರಲ್ಲಿ 180 ಮಹಿಳಾ ಅಭ್ಯರ್ಥಿಗಳಿದ್ದರು.

ಬಳಿಕ ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಅವರು ಮಾತನಾಡಿ, ದಕ್ಷಿಣ ಭಾರತದಲ್ಲೇ ಮೈಸೂರು ವಿವಿ ಹಾಗೂ ಮೈಸೂರು ಶಿಕ್ಷಣಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಾ ಬಂದಿದೆ. ಕಲೆ, ಸಾಹಿತ್ಯಕ್ಕೂ ಪ್ರೋತ್ಸಹ ನೀಡುತ್ತಾ ಬಂದಿದೆ ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯದ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಮಾತನಾಡಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್.ಶಂಕರ್, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರಿಗೆ ಗೌರವ ಡಾಕ್ಟರೆಟ್ ನೀಡಿರುವುದರಿಂದ ಯೂನಿವರ್ಸಿಟಿಯ ಗೌರವವನ್ನು ಹೆಚ್ಚಿಸಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಲ್ಪನೆಯಲ್ಲಿ ಮೂಡಿದ ಹಾಗೂ ಶತಮಾನ ಕಂಡಿರುವ ವಿಶ್ವವಿದ್ಯಾನಿಲಯ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದು ಹೆಮ್ಮೆಯ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೋ.ಲೋಕನಾಥ್, ಕುಲಸಚಿವರಾದ ಶೈಲಜ, ರಕ್ಷಣಾ ಸಂಶೋದನೆ ಮತ್ತು ಅಭಿವೃದ್ದಿ ಸಂಸ್ಥೆಯ ವಿಶ್ರಾಂತ ಮಹಾನಿರ್ದೇಶಕರಾದ ಪದ್ಮವಿಭೂಷಣ ಪ್ರಶಸ್ತಿ ಪಡೆದಿರುವ ಡಾ.ವಾಸುದೇವ್ ಕೆ.ಆತ್ರೆ ಸೇರಿದಂತೆ ಇತರರು ಹಾಜರಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *