ದಸರಾ2023:ಕೇಂದ್ರ ಕಾರಾಗೃಹವಾಸಿಗಳಿಗೆ ಯೋಗಾಭ್ಯಾಸ…

ಮೈಸೂರು,ಅ20,Tv10 ಕನ್ನಡ

ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು. ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ಬಿ.ಎಸ್ ರಮೇಶ್ ಅವರು ತಿಳಿಸಿದರು.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ಯೋಗದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ತನ್ನಿಂದ ತಾನೇ ಬರುವಂತಹ ವಸ್ತುವಲ್ಲ ಅದಕ್ಕೆ ನಿರ್ವಹಣೆಯ ಅವಶ್ಯಕತೆ ಇದೆ. ನಮ್ಮ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಯೋಗ ಅತಿ ಅವಶ್ಯಕ. ನಾಡ ಹಬ್ಬ ಮೈಸೂರು ದಸರಾ ಸವಿ ನೆನಪು ಕಟ್ಟಿಕೊಳ್ಳಲು ಇಂದು ನಮ್ಮ ಕಾರಾಗೃಹದಲ್ಲಿ ವಿಶಿಷ್ಟ ಯೋಗ ಅಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಂದು ವಿನೂತನ ಪ್ರಯತ್ನ ಎಂದರು.
ದಸರಾ ಉತ್ಸವದ ಜೊತೆಗೆ ಯೋಗದ ಉಪ ಸಮಿತಿ ಈ ಬಾರಿ ಯೋಗ ಉತ್ಸವವನ್ನು ಮಾಡುತ್ತಿದೆ.ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರಾಗೃಹದಲ್ಲಿ ವಾಸಿಸುವ ನೀವುಗಳು ಅಲ್ಪ ಕಾಲಕ್ಕೆ ಮಾತ್ರ ಇಲ್ಲಿ ವಾಸಿಸುತ್ತೀರಾ. ಹಾಗಾಗಿ ಯಾವುದು ಕ್ಷಣಾರ್ಧದಲ್ಲಿ ಮಾಡಿದ ತಪ್ಪಿಗೆ ಸೆರೆಮನೆಯ ವಾಸವನ್ನು ಅನುಭವಿಸುತ್ತಿದ್ದೀರಿ. ಇಲ್ಲಿಂದ ಹೊರಡುವ ಮುನ್ನ ಮನಃಪರಿವರ್ತನೆ ಮಾಡಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಒಳ್ಳೆಯದನ್ನು ಬಯಸುವಂತಹ ಮನಸ್ಸನ್ನು ಇಟ್ಟು ಹೊರಡಬೇಕು. ವಿವಿಧ ಸಂಘ ಸಂಸ್ಥೆಗಳ ಅಡಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ಪೋಷಣೆ ಮಾಡಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಮಾಡುವ ಪ್ರಯತ್ನವನ್ನು ಇಂದಿನ ಕಾರಾಗೃಹಗಳು ಮಾಡುತ್ತಿವೆ ಎಂದರು.

ಕಳೆದ ಒಂದು ತಿಂಗಳಿಂದ ಕಾರಾಗೃಹದಲ್ಲಿ ಯೋಗ ತರಬೇತಿಯನ್ನು SPYSS ಸಂಸ್ಥೆಯಿಂದ ನೀಡಲಾಗಿತ್ತು. ಸುಮಾರು 300 ಸೆರೆಮನೆ ವಾಸಿಗರು ಎರಡು ಗಂಟೆಗಳ ಕಾಲ ಯೋಗವನ್ನು ಅಭ್ಯಾಸ ಮಾಡಿದರು. ಚಾಮರಾಜನಗರ ಜಿಲ್ಲಾ ಆಡಳಿತ, ಆಯುಷ್ ಸಂಸ್ಥೆಯ ಸದಸ್ಯರು, ದಸರಾ ಯೋಗ ಉಪಸಮಿತಿಯ ಸದಸ್ಯರು ಎಲ್ಲರೂ ಕೂಡ ಯೋಗ ಮಾಡಿ ಸಿಹಿ ಹಂಚಿ ಯೋಗ ದಸರಾವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಕಾರಾಗೃಹದ ಕಾರ್ಯನಿರ್ವಾಹದ ದಾಮೋದರ್ ,ಯೋಗ ದಸರಾ ಉಪ ಸಮಿತಿಯ ಉಪಾಧ್ಯಕ್ಷರಾದ ಮಹೇಶ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಕೆ ರಮ್ಯಾ, ಯೋಗ ದಸರಾ ಉಪ ಸಮಿತಿಯ ಕಾರ್ಯಧ್ಯಕ್ಷರಾದ ಡಿ.ಎಮ್ ರಾಣಿ, ಹಾಗೂ ಕಾರ್ಯದರ್ಶಿ ಡಾ.ಪುಷ್ಪಾ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು, ಯೋಗ ಶಿಕ್ಷಣ ಮತ್ತು ಸಂಶೋಧನೆಯ ಸದಸ್ಯರು, ಮತ್ತು ಯೋಗ ದಸರಾ ಉಪ ಸಮಿತಿಯ ಸದಸ್ಯರು ಹಾಜರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *