ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…
- TV10 Kannada Exclusive
- October 20, 2023
- No Comment
- 181


ಮೈಸೂರು,ಅ20,Tv10 ಕನ್ನಡ

ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದು
ಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ
ದಸರಾ ಪ್ರಯುಕ್ತ ಪಾರಂಪರಿಕ
ಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.
ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.
ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.
ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ.
ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ.
ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೆ ಮಾಡಲು ಆಗಲ್ಲ.
ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ.
ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ.
ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ (ಜೂಮ್ ಮಿಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂದ ಚರ್ಚಿಸಿದ್ದೇನೆ.
ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದರು…
