ಒಕ್ಕಲಿಗರ ಕುರಿತು ಅವಹೇಳನಾಕಾರಿ ಹೇಳಿಕೆ ಆರೋಪ…ಪ್ರೊ.ಕೆ.ಎಸ್.ಭಗವಾನ್ ವಿರುದ್ದ FIR ದಾಖಲು…
- TV10 Kannada Exclusive
- October 21, 2023
- No Comment
- 197


ಮೈಸೂರು,ಅ21,Tv10 ಕನ್ನಡ
ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಪ್ರೊ ಕೆ ಎಸ್ ಭಗವಾನ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 153 ಹಾಗೂ 153 A ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮೈಸೂರಿನ ಗಂಗಾಧರ್ ಸಿ ಎಂಬುವವರು ದೂರು ನೀಡಿದ್ದರು.
ಗಂಗಾಧರ್ ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ಅಧ್ಯಕ್ಷರಾಗಿದ್ದಾರೆ.
ಪ್ರೊ ಭಗವಾನ್ ರವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುತ್ತಾರೆ ಎಂದು ದೂರಿನಲ್ಲಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ…