ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…
- TV10 Kannada Exclusive
- October 26, 2023
- No Comment
- 446
ಮೈಸೂರು,ಅ26,Tv10 ಕನ್ನಡ
ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ.ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ.ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ.ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ ನೀಲಗಿರಿಮರದ ಪಟ್ಟಿಯಿಂದ ತಲೆಗೆ ಹೊಡೆದಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದ ಆಸಿಫ್ ನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.ಹೊಡೆದಾಟದಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಗೂ ಸಹ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿಗಖಾದ ಮುತ್ತುರಾಜ್ ಹಾಗೂ ಜಾಹ್ನವಿ,ಎಸಿಪಿ ಶಾಂತಮಲ್ಲಪ್ಪ,ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜು ರವರು ಭೇಟಿ ನೀಡಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..