ಎಚ್.ಡಿ.ಕೋಟೆ: ಕಾಡಾನೆ ದಾಳಿ…ರೈತ ಸಾವು…
- TV10 Kannada Exclusive
- October 28, 2023
- No Comment
- 165

ಎಚ್.ಡಿ.ಕೋಟೆ,ಅ28,Tv10 ಕನ್ನಡ
ಕಾಡಾನೆ ದಾಳಿಗೆ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ನಡೆದಿದೆ.
ವಸಂತ (35) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ.ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಕಾವಲಿಗೆ ಗುರುವಾರ ರಾತ್ರಿ ಬಾಮೈದನ ಜೊತೆ ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.ಕಾಡಿಗೆ ಹಿಮ್ಮಟ್ಟಿಸಲು ಯತ್ನಿಸಿದ ಸಂದರ್ಭದಲ್ಲಿ ದಾಳಿ ನಡೆಸಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ.ಕಾಡಾನೆ ಹಾವಳಿ ತಪ್ಪಿಸುವಂತೆ ಕ್ರಮವಹಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ದಾರೆ. ಭೀಮನಹಳ್ಳಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…