ಕಾಡಾನೆ ಅಟ್ಯಾಕ್…ಮುರಿದ ರೈತನ ಕಾಲು…
- TV10 Kannada Exclusive
- October 28, 2023
- No Comment
- 174

ನಂಜನಗೂಡು,ಅ28,Tv10 ಕನ್ನಡ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಬಲಗಾಲು ಮುರಿದ ಘಟನೆ ನಂಜನಗೂಡಿನ ಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.ಬೋಳಯ್ಯ(75) ಕಾಡಾನೆಯ ದಾಳಿಯಿಂದ ಕಾಲು ಮುರಿದುಕೊಂಡಿರುವ ರೈತ.ಸ್ಥಳಕ್ಕೆ ನಂಜನಗೂಡಿನ ಅರಣ್ಯ ಇಲಾಖೆಯ ಅಧಿಕಾರಿ ನಿಕಿತ್ ಮತ್ತು ಸಿಬ್ಬಂದಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ದೊಡ್ಡಯ್ಯ ಸೇರಿದಂತೆ ಇತರೆ ಸಿಬ್ಬಂದಿಗಳು ಗಾಯಳುನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮದ ರೈತರು ಮತ್ತು ಸಾರ್ವಜನಿಕರು ಮಾತಿನ ಚಕಮಕಿ ನಡೆಸಿದ್ದಾರೆ.ಚಿಕ್ಕದೇವಮ್ಮನ ಬೆಟ್ಟದ ತಪ್ಪಲಿನಿಂದ ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿವೆ.
ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ತಿಂದು ತುಳಿದು ನಾಶಪಡಿಸುತ್ತಿವೆ.
ಅರಣ್ಯ ಇಲಾಖೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು…