ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಮೈಸೂರು,ನ1,Tv10 ಕನ್ನಡ

ಹುಲಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದನಗಾಹಿ ವೀರಭದ್ರ ಬೋವಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವೀರಭದ್ರಭೋವಿಯ ಆರೋಗ್ಯವನ್ನ ಶಾಸಕ ದರ್ಶನ್ ಧ್ರುವನಾರಾಯಣ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ವೀರಭದ್ರ ಭೋವಿಯ ಕತ್ತಿನ ಭಾಗ ಮತ್ತು ದೇಹದ ಭಾಗದಲ್ಲಿ ಗಾಯವಾಗಿದೆ. ಒಂದು ವಾರದಲ್ಲಿ ಗುಣಮುಖರಾಗುತ್ತಾರೆ ಎಂದು ಕೆಆರ್ ಆಸ್ಪತ್ರೆ ವೈದ್ಯಾಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.ಎರಡು ಜಾನುವಾರುಗಳನ್ನು ವ್ಯಾಘ್ರ ಬಲಿ ಪಡೆದಿದೆ. ಪರಿಹಾರ ಕಲ್ಪಿಸಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಿ ಎಂದು ವೀರಭದ್ರ ಭೋವಿ ಶಾಸಕ ದರ್ಶನ ಧ್ರುವನಾರಾಯಣ್ ಬಳಿ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಮತ್ತು ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸಿ ಕೊಡುವುದಾಗಿ ಅಭಯ ನೀಡಿದ್ದಾರೆ.
ಘಟನೆಯಿಂದ ಹೆಡಿಯಾಲ ಅರಣ್ಯ ವಲಯದ
ನಾಗಣಪುರ, ಮಹದೇವ ನಗರ ಅಂಜನಾಪುರ ಹಾದನೂರು ಒಡೆಯನಪುರ ಬಂಕಹಳ್ಳಿ ಗ್ರಾಮಗಳ ಸುತ್ತಮುತ್ತಲ ಸಾರ್ವಜನಿಕರು ಮತ್ತು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಸಕರಿಗೆ ಮಾಜಿ ಶಾಸಕ ಕಳಲೆ ಶಿವಮೂರ್ತಿ ಸೇರಿದಂತೆ ಇತರ ಮುಖಂಡರು ಸಾಥ್ ನೀಡಿದ್ದರು..

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *