ಅನ್ನದಾನ ವಿಚಾರದಲ್ಲಿ ಕಿರಿಕ್…ಪುರಸಭೆ ಸದಸ್ಯನಿಗೆ ಹಲ್ಲೆ…ಮೂವರ ವಿರುದ್ದ FIR ದಾಖಲು…

  • Crime
  • November 2, 2023
  • No Comment
  • 385

ಹುಣಸೂರು,ನ2,Tv10 ಕನ್ನಡ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅನ್ನದಾನ ಕಾರ್ಯಕ್ರಮದ ವಿಚಾರದಲ್ಲಿ ಕಿರಿಕ್ ತೆಗೆದ ಅಪ್ಪ ಮಕ್ಕಳು ಜಾತಿ ನಿಂದನೆ ಮಾಡಿ ಪುರಸಭಾ ಸದಸ್ಯನಿಗೆ ಹಲ್ಲೆ ನಡೆಸಿದ ಘಟನೆ ಹುಣಸೂರಿನಲ್ಲಿ ನಡೆದಿದೆ.ಪುರಸಭಾ ಸದಸ್ಯ ಮಂಜು ಮೇಲೆ ಹಲ್ಲೆ ನಡೆದಿದೆ.ಗಾಯಗೊಂಡ ಮಂಜು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಲ್ಲೆ ನಡೆಸಿದ ಕಾರು ಸ್ಟ್ಯಾಂಡ್ ಸಂಘಟನೆಯ ಅಧ್ಯಕ್ಷ ದೇವರಾಜ್ ಹಾಗೂ ಇವರ ಮಕ್ಕಳಾದ ರಾಕೇಶ್,ಶರತ್ ಮೇಲೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ರಾಜ್ಯೋತ್ಸವ ಹಿನ್ನಲೆ ಕಾರ್ ಸ್ಟ್ಯಾಂಡ್ ಸಂಘಟನೆಯಿಂದ ನವೆಂಬರ್ 1 ರಂದು ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಂಘಟನೆಯ ಉಪಾಧ್ಯಕ್ಷರಾದ ಮಂಜು ಅನ್ನದಾನ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ರು.ಈ ವೇಳೆ ಎಂಟ್ರಿ ಕೊಟ್ಟ ಅಧ್ಯಕ್ಷ ದೇವರಾಜ್ ಅನ್ನದಾನದ ವಿಚಾರದಲ್ಲಿ ಕಿರಿಕ್ ತೆಗೆದರು.ಜಾತಿ ವಿಚಾರ ಮುಂದಿಟ್ಟುಕೊಂಡು ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿತು.ಈ ವೇಳೆ ಸ್ಥಳಕ್ಕೆ ಬಂದ ದೇವರಾಜ್ ಮಕ್ಕಳಾದ ರಾಕೇಶ್ ಹಾಗೂ ಶರತ್ ಇಬ್ಬರು ಮಂಜು ಮೇಲೆ ಹಿಗ್ಗಾ ಮುಗ್ಗ ಹಲ್ಲೆ ನಡೆಸಿದ್ದಾರೆ.ಸ್ಥಳದಲ್ಲಿದ್ದ ಕೆಲವು ಮಂದಿ ಮಂಜು ನೆರವಿಗೆ ಬಂದಿದ್ದಾರೆ.ಗಾಯಗೊಂಡ ಮಂಜು ಹುಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೇವರಾಜ್,ರಾಕೇಶ್ ಹಾಗೂ ಶರತ್ ಮೇಲೆ ಹುಣಸೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *