ದಕ್ಷಿಣ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ…ಮೂವರು ಸುಲಿಗೆಕೋರರ ಬಂಧನ…ನಗದು,ಚಾಕು ವಶ…

ಮೈಸೂರು,ನ12,Tv10 ಕನ್ನಡ

ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಸುಲಿಗೆಕೋರರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 24850/- ನಗದು ಕೃತ್ಯಕ್ಕೆ ಬಳಸಿದ ಎರಡು ಮೋಟಾರ್ ಸೈಕಲ್ ಒಂದು ಚಾಕು ವಶಪಡಿಸಿಕೊಂಡಿದ್ದಾರೆ.ಮುಹೀನ್(30),ಸುಹೇಲ್ ಬೇಗ್( 35) ಹಾಗೂ ಮೊಹಮದ್ ಶೋಹೆಬ್(24) ಬಂಧಿತರು.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ ಬಳಿ ರಾತ್ರಿ ವೇಳೆ ನಿಂತಿದ್ದ ಕಾರು ಚಾಲಕನಿಗೆ ಚಾಕು ತೋರಿಸಿ ಥಳಿಸಿ ಅವರ ಬಳಿ ಇದ್ದ 16 ಸಾವಿರ ನಗದು,ಎರಡು ಮೊಬೈಲ್ ಕಿತ್ತು ಪರಾರಿಯಾಗಿದ್ದರು.ಆರೋಪಿಗಳ ಪತ್ತೆಗೆ ಮೈಸೂರು ಜಿಲ್ಲಾ ಅಧೀಕ್ಷಕರಾದ ಸೀಮಾಲಾಟ್ಕರ್,ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪೂರ್ಣಚಂದ್ರ ತೇಜಸ್ವಿ ಉಸ್ತುವಾರಿಯಲ್ಲಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶೇಖರ್ ಹಾಗೂ ಪಿಎಸ್ಸೈ ಚಂದ್ರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಹೇಶ್,ಪ್ರಸನ್ನಕುಮಾರ್,ರವಿ,ವಿಶ್ವನಾಥ್,ಸಂಜಯ್,ರಾಘವೇಂದ್ರ,ಕೃಷ್ಣಮೂರ್ತಿ,ಮಹಿಳಾ ಸಿಬ್ಬಂದಿ ಗೀತಾ ರನ್ನೊಳಗೊಂಡ ತಂಡ ರಚಿಸಲಾಗಿತ್ತು.ಕಾರ್ಯಾಚರಣೆ ನಡೆಸಿದ ತಂಡ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.ಆರೋಪಿಗಳನ್ನ ಸೆದೆಬಡಿದ ತಂಡಕ್ಕೆ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಪ್ರಶಂಸಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *