ಪೊಲೀಸರ ಕಿರುಕುಳ ಆರೋಪ…ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ…
- Crime
- November 13, 2023
- No Comment
- 329
ನಂಜನಗೂಡು,ನ13,Tv10 ಕನ್ನಡ
ಖಾಕಿ ಕಿರುಕಳ ಆರೋಪ ಹಿನ್ನಲೆ ಬೇಸತ್ತ ಯುವಕ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ
ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಕಿರಣ್ ಕುಮಾರ್ (23) ಆತ್ಮಹತ್ಯೆಗೆ ಯತ್ನಿಸಿದ ಯುವಕ.ಕಿರಣ್ ಕುಮಾರ್ ನನ್ನು ಬಿಳಿಗೆರೆ ಪೊಲೀಸರು
ಗ್ರಾಮದಲ್ಲಿ ನಡೆದಿದ್ದ ಗಲಾಟೆ ವಿಚಾರದಲ್ಲಿ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದರು.
ಪೊಲೀಸ್ ವಶದಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ ಕಿರಣ್
ಮನೆಯಲ್ಲಿ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಗಾಯಗೊಂಡಿರುವ ಕಿರಣ್ ಗೆ
ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಕಿರಣ್ ಹೇಳಿಕೆ ನೀಡಿದ್ದಾನೆ.
ಆಸ್ಪತ್ರೆಗೆ ನಂಜನಗೂಡು ಡಿವೈಎಸ್‌ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…