ಬರ ಪರಿಸ್ಥಿತಿ: ಬೆಳೆ ನಾಶ ಪರಿಶೀಲನೆ
- TV10 Kannada Exclusive
- November 21, 2023
- No Comment
- 134

ಮಂಡ್ಯ,ನ.21:-ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ ಎಂದರು.
ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಸರ್ಕಾರದ ಹಣ ಬಿಡುಗಡೆ ಮಾಡುವುದು ತಡವಾದರೆ, ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದರು.
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುತ್ತೇವೆ ಎಂದರು.
ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತದೆ. ಕೇಂದ್ರ ತಂಡ ಬೆಳೆ ಸಮಿಕ್ಷೆ ನಡೆಸಿ ವರದಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಜನರ ಪರ ಕೆಲಸ ಮಾಡುತ್ತದೆ.
ಇದೇ ಸಂದರ್ಭದಲ್ಲಿ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು