ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್…ಎಸ್ಪಿ ಸೀಮಾ ಲಾಟ್ಕರ್ ಆದೇಶ…

ನಂಜನಗೂಡು,ನ21,Tv10 ಕನ್ನಡ

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗಲಾಟೆ ವಿಚಾರದಲ್ಲಿ ನವೆಂಬರ್ 12 ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿದ್ದಾರೆ.ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳುವ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ರವರದ್ದಾಗಿರುತ್ತದೆ.ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.ಕರ್ತವ್ಯಲೋಪ ಹಿನ್ನಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *