ಯುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿ ಡಾ: ಪಿ.ಸಿ. ಜಾಫರ್
- TV10 Kannada Exclusive
- November 24, 2023
- No Comment
- 391

ಮಂಡ್ಯ,ನ, 24:-ಜಿಲ್ಲೆಯಲ್ಲಿ ಅರ್ಹ ಯುವ ಮತದಾರರನ್ನು ಗುರುತಿಸಿ 1 ಜನವರಿ 2024 ಕ್ಕೆ 18 ವರ್ಷ ತುಂಬುವವರನ್ನು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ: ಪಿ.ಸಿ. ಜಾಫರ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ನೊಂದಣಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. 2011 ರ ಜನಗಣತಿ ಪ್ರಕಾರ 5- 6 ವರ್ಷದ ಹೆಣ್ಣು ಹಾಗೂ ಗಂಡು ಮಕ್ಕಳ ಗಣತಿಯ ಪ್ರಕಾರ ಹೊಸದಾಗಿ ನೊಂದಣಿಯಾಗಿರುವವರನ್ನು ತಾಳೆ ಮಾಡಿಕೊಳ್ಳಿ ಎಂದರು.
ಪದವಿಪೂರ್ವ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಐ.ಟಿ.ಐ, ಡಿಪ್ಲೊಮಾ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ ಎಂದರು.
ಕಾಲೇಜುಗಳಿಗೆ ಭೇಟಿ ನೀಡಿದಾಗ ಹೊರ ರಾಜ್ಯಅಥವಾ ಜಿಲ್ಲೆಯ ವಿದ್ಯಾರ್ಥಿಗಳು ಇದ್ದರೂ ಅವರು ಸಹ ಹೆಸರು ನೊಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಿ ಎಂದರು.
ಮತದಾರರ ನೊಂದಣಿ ಕುರಿತಂತೆ ಈಗಾಗಲೇ ಎರಡು ವಿಶೇಷ ಮತದಾರರ ನೊಂದಣಿ ಶಿಬಿರವನ್ಬು ಆಯೋಜಿಸಲಾಗಿದೆ. ಡಿಸೆಂಬರ್ 3 ಮತ್ತು 4 ರಂದು ವಿಶೇಷ ನೊಂದಣಿ ಶಿಬಿರ ನಡೆಯಲಿದೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಯಿಸಿಕೊಳ್ಳಿ ಎಂದರು.
ಯುವ ಮತದಾರರಿಗೆ ಸಂಬಂಧಿಸಿದಂತೆ 11760 ಪುರುಷರು ಹಾಗೂ 9478 ಮಹಿಳಾ ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.ಯುವ ಮಹಿಳಾ ಮತದಾರರ ಹೆಸರು ನೊಂದಣಿಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾರರ ನೊಂದಣಿ ಜಾಗೃತಿ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.