ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದು
ಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.
ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ ದನಗಾಹಿಯನ್ನ ಕೊಂದಿತ್ತು.ಹೆಡಿಯಾಲ ಮತ್ತು ಸುತ್ತಮುತ್ತಲು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬಳ್ಳೂರು ಹುಂಡಿ ಗ್ರಾಮದ ಕಲ್ಲಹಾರ ಖಂಡಿ ಎಂಬ ಸ್ಥಳದಲ್ಲಿ ಹುಲಿ ಸೆರೆಯಾಗಿದೆ.
ಸೆರೆಸಿಕ್ಕ ಹುಲಿಯನ್ನ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಹುಲಿಗಳ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.
ವೈದ್ಯಾಧಿಕಾರಿ ವಾಸಿಮ್ ನರಭಕ್ಷಕ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ರಮೇಶ್ ಕುಮಾರ್ ಹಾಗೂ ಹೆಡಿಯಾಲ ಎಸಿ ಎಫ್ ಪರಮೇಶ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚುಮಂದಿ ಕಾರ್ಯಾಚರಣೆ ನಡೆಸಿದ್ದರು.ಹಲವು ಸಿಸಿ ಕ್ಯಾಮರಾಗಳನ್ನ ಬಳಕೆ ಮಾಡಲಾಗಿತ್ತು.ಸಿಸಿ ಕ್ಯಾಮರಾದಲ್ಲಿ ಎರಡು ಹುಲಿಗಳು ಪತ್ತೆಯಾಗಿತ್ತು.ಸಧ್ಯ ಒಂದು ಹುಲಿ ಸೆರೆಯಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *