ಗೃಹಲಕ್ಷ್ಮಿ ಯೋಜನೆ…ನಾಡದೇವಿಗೆ 59 ತಿಂಗಳ ಹಣ ಅರ್ಪಣೆ…ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ರಿಂದ ವೈಯುಕ್ತಿಕವಾಗಿ ಸಂದಾಯ…
- TV10 Kannada Exclusive
- November 28, 2023
- No Comment
- 409

ಮೈಸೂರು,ನ27,Tv10 ಕನ್ನಡ
ಮನೆ ಯಜಮಾನಿಗೆ ಪ್ರತಿತಿಂಗಳು 2 ಸಾವಿರ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ನಾಡದೇವಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ.ತಮ್ಮ ವೈಯುಕ್ತಿಕ ಹಣದಲ್ಲಿ ಸಂದಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.
ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿ ಕೆ ಶಿವಕುಮಾರ್ ಸೂಚಿಸಿದ್ದರು.
ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ.
59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.
1,18,000 ರೂಪಾಯಿ ಹಣವನ್ನ ದೇಗುಲಕ್ಕೆ ನೀಡಿದ್ದಾರೆ.
ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯವಾಗಿದೆ.
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಿದೆ.
ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅರ್ಪಿಸಿದ್ದಾರೆ…