ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…
- Crime
- December 2, 2023
- No Comment
- 273
ಬೆಂಗಳೂರು,ಡಿ2,Tv10 ಕನ್ನಡ
ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಭಯಾನಕ ಸತ್ಯವನ್ನು ಪೊಲೀಸರಿಗೆ ತಿಳಿಸಿದ್ದಾಳೆ.
ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ಕೃತ್ಯವೆಸಗಿರುವುದನ್ನ ತಿಳಿಸಿದ್ದಾಳೆ.ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂಬ ಭಯಾನಕ ಮಾಹಿತಿ ನೀಡಿದ್ದಾಳೆ.12 ವಾರ ಕಳೆದ ಮಕ್ಕಳನ್ನು ಅಬಾರ್ಷನ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ನಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ತಿಳಿಸಿದ್ದಾಳೆ.ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ, ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ನದಿಗೆ ಬಿಸಾಕುವ ಕೆಲಸ ಮಾಡುತ್ತಿದ್ದ. 6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂದು ನರ್ಸ್ ಮಂಜುಳ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆಂದು ಹೇಳಲಾಗಿದೆ…