ನಂಜನಗೂಡು ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ನಿವಾಸದ ಮೇಲೆ ಲೋಕಾ ದಾಳಿ…
- Crime
- December 5, 2023
- No Comment
- 742

ಮೈಸೂರು,ಡಿ5,Tv10 ಕನ್ನಡ
ಬೆಳ್ಳಂಬೆಳಗ್ಗೆ ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ ನಡೆದಿದೆ.ನಂಜನಗೂಡು ಸರ್ಕಾರಿ ಕಾಲೇಜು
ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಲಾಗುತ್ತಿದೆ.
ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ ನಡೆಸುತ್ತಿರುವ ಮಾಹಿತಿ ತಿಳಿದು ಬಂದಿದೆ.
ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನಲೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ…