ತಲೆಗೆ ಮೆಷಿನ್ ಬಡಿದು ಕಾರ್ಮಿಕ ಸಾವು…ಕೃಷಿ ಜಿಯೋ ಪ್ಯಾಕ್ ಪ್ರೈ.ಲಿ.ನಲ್ಲಿ ಘಟನೆ…

  • Crime
  • December 5, 2023
  • No Comment
  • 480

ನಂಜನಗೂಡು,ಡಿ5,Tv10 ಕನ್ನಡ

ತಲೆಗೆ ಮಿಷಿನ್ ಬಡಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈ.ಲಿ.ನಲ್ಲಿ ನಡೆದಿದೆ.
ಆಶೀಸ್ ಸುಖದಾಸ್ ಪಾಟ್ಲೆ (24)ಮೃತ ಕಾರ್ಮಿಕ.
ಮಹಾರಾಷ್ಟ್ರ ಮೂಲದ ಕಾರ್ಮಿಕನಾಗಿದ್ದು,ಕಳೆದ ನಾಲ್ಕು ವರ್ಷಗಳಿಂದ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *