ಪಾನಮತ್ತ ಯುವಕರ ಗಲಾಟೆ…ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ…!!

ಕೆ.ಆರ್.ನಗರ,ಡಿ10,Tv10 ಕನ್ನಡ

ಕುಡಿದು ಗಲಾಟೆ ಮಾಡಿದ ಯುವಕರನ್ನ ಪ್ರಶ್ನೆ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆಯಾಗಿದೆ.
ಮೈಸೂರು ಜಿಲ್ಲೆ ಕೆ ಆರ್ ನಗರದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕೆ.ಆರ್.ನಗರ ಪೊಲೀಸ್ ಠಾಣೆ
ಪೊಲೀಸ್ ಕಾನ್ಸಟೇಬಲ್ ಪುನೀತ್ ಹಾಗೂ ಹರೀಶ್‌ಗೆ ವರ್ಗಾವಣೆ ಶಿಕ್ಷೆಯಾಗಿದೆ.
ಐದು ದಿನದ ಹಿಂದೆ ಕೆ ಆರ್ ನಗರ ಪಟ್ಟಣದಲ್ಲಿ ಗಲಾಟೆ ನಡೆದಿತ್ತು.
ಸಾರ್ವಜನಿಕ ಸ್ಥಳದಲ್ಲಿ ಕುಡಿಯುತ್ತಿದ್ದ ಯುವಕರನ್ನ ಕಾನ್ಸಟೇಬಲ್‌ಗಳಾದ ಪುನೀತ್ ಹಾಗೂ ಹರೀಶ್ ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಪೊಲೀಸರ ಜೊತೆ ಯುವಕರ ಮಾತಿನ ಚಕಮಕಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
ಕೆ ಆರ್ ನಗರ ತಾಲ್ಲೂಕು ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಅವರ ಪುತ್ರ ಹಾಗೂ ಸ್ನೇಹಿತರು ಗಲಾಟೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಚೀರನಹಳ್ಳಿ ಶಿವಣ್ಣ
ಮಗನಿಗೆ ಬುದ್ದಿ ಹೇಳಿ ಜಗಳ ಬಿಡಿಸಿ ಕಳುಹಿಸಿದ್ದರು.
ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇವೆ ಅಂತಾ ಧಮ್ಕಿ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ.
ಘಟನೆ ನಂತರ ವಾಪಸ್ಸಾಗಿದ್ದ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಇದಾದ ಮರುದಿನ ಇಬ್ಬರು ಕಾನ್ಸಟೇಬಲ್‌ಗಳು ವರ್ಗಾವಣೆಯಾಗಿದೆ.
ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಅಂತಾ ಆದೇಶವಾಗಿದೆ.
ಹರೀಶ್‌ಗೆ ಕೆ ಆರ್ ನಗರ ಠಾಣೆಯಿಂದ ಬಿಳಿಕೆರೆ ಪೊಲೀಸ್ ಠಾಣೆಗೆ ವರ್ಗಾವಣೆ
ಪುನೀತ್‌ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *