ಹಾಡುಹಗಲೇ ಮರ್ಡರ್ ಅಟೆಂಪ್ಟ್…ಏಳೆಂಟು ಮಂದಿ ಗುಂಪಿನಿಂದ ಕೃತ್ಯ…

  • Crime
  • December 12, 2023
  • No Comment
  • 784

ಮೈಸೂರು,ಡಿ12,Tv10 ಕನ್ನಡ
ಹಾಡುಹಗಲೇ ಮೈಸೂರಿನ ಹೃದಯ ಭಾಗದಲ್ಲಿ ಮಚ್ಚು ಲಾಂಗು ಝಳುಪಿಸಿದೆ.
ಟೀ ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಗುಂಪೊಂದು ಹಲ್ಲೆ ನಡೆಸಿದೆ.
ದೇವರಾಜ ಮೊಹಲ್ಲಾದ ಬಿಡಾರಾಂ ಕೃಷ್ಣಪ್ಪ ರಸ್ತೆಯ ಅಂಬೇಡ್ಕರ್ ಭವನದ ಬಳಿ ಘಟನೆ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ ಏಳೆಂಟು ಮಂದಿಯ ತಂಡದಿಂದ ಕೃತ್ಯ ನಡೆದಿದೆ.
ರಾಮ್ ದೇವ್ ಟೀ ಸ್ಟಾಲ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ.
ಟೀ ಸ್ಟಾಲ್ ಗೆ ಹೊಂದಿಕೊಂಡಿರುವ ಮನೆಯ ಮುಂಭಾಗದಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನ ದೇವರಾಜ ಠಾಣೆ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಿನಿಮೀಯ ಮಾದರಿಯಲ್ಲಿ ಹಾಡಹಗಲಿ‌‌ನಲ್ಲೇ ನಡೆದ ಘಟನೆಯಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ.
ಹಲ್ಲೆಗೊಳಗಾಗಿರುವ ವ್ಯಕ್ತಿ ಹಬೀಬ್ ಅಲಿಯಾಸ್ ಸುಕ್ಕಾ ಎಂದು ಹೇಳಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *