ಅರಣ್ಯ ಸಂಚಾರಿ ದಳ ಕಾರ್ಯಾಚರಣೆ…ಅಕ್ರಮವಾಗಿ ಸಾಗಿಸುತ್ತಿದ್ದ ಗಂಧದ ತುಂಡುಗಳು ವಶ…ಮೂವರ ಬಂಧನ…

  • Crime
  • December 13, 2023
  • No Comment
  • 359

ಮೈಸೂರು,ಡಿ13,Tv10 ಕನ್ನಡ

ಅರಣ್ಯ ಸಂಚಾರಿ ದಳ ಮೈಸೂರು ವಿಭಾಗದ ತಂಡ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಗಂಧದ ಮರದ ತುಂಡುಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನವಾಗಿದೆ.ಶಿವಮೊಗ್ಗ ಮೂಲದ ರಾಘವೇಂದ್ರ ಗುಡಿಗಾರ್,ಸಚಿನ್ ಎಂ ಗುಡಿಗಾರ್ ಹಾಗೂ ನಾರಾಯಣ್ ಬಂಧಿತ ಆರೋಪಿಗಳು.ಶಿರಸಿಯಿಂದ ಮೈಸೂರಿನ ಮಂಡಿಮೊಹಲ್ಲಾ ಗೆ ತರಲಾಗುತ್ತಿದ್ದ 308 ಕೆ.ಜಿ.ತೂಕದ ಗಂಧದ ತುಂಡುಗಳನ್ನ ವಶಪಡಿಸಿಕೊಳ್ಳಲಾಗಿದೆ.ಗಂಧದ ಮರದ ತುಂಡುಗಳನ್ನ ಸಾಗಿಸಲು ಬಳಸಿದ್ದ ಕಾರನ್ನೂ ಸಹ ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆ ಸಿಐಡಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ಮಡಿಕೇರಿ ಅರಣ್ಯ ಇಲಾಖೆ ಸಿಐಡಿ ವಿಭಾಗದ ಎಸ್ಪಿ ಎಸ್.ಎಸ್.ಕಾಶಿ ಮಾರ್ಗದರ್ಶನದಲ್ಲಿ ಮೈಸೂರು ಅರಣ್ಯ ಸಂಚಾರ ದಳದ ಪಿಎಸ್ಸೈ ಲಕ್ಷ್ಮಿ,ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪಿಎಸ್ಸೈ ವಿಜಯರಾಜು,ಸಾಗರ ಅರಣ್ಯ ಸಂಚಾರಿ ದಳದ ಪಿಎಸ್ಸೈ ವಿನಾಯಕ ಹಾಗೂ ಸಕಲೇಶಪುರ ಅರಣ್ಯ ಸಂಚಾರಿ ದಳದ ಪಿಎಸ್ಸೈ ಸ್ವಾಮಿ ಮತ್ತು ಸಿಬ್ಬಂದಿಗಳಾದ ಜುಹೂರ್ ಅಹಮದ್,ಹೇಮರಾಜು,ಕೃಷ್ಣೇಗೌಡ,ಅರುಣ್ ರವರು ಭಾಗವಹಿಸಿ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *