ಭ್ರೂಣಹತ್ಯೆ ಪ್ರಕರಣ…ಮೈಸೂರಿನಲ್ಲಿ 14 ಕ್ಲಿನಿಕ್ ಗಳಿಗೆ ಬೀಗ…
- Crime
- December 16, 2023
- No Comment
- 127

ಮೈಸೂರು,ಡಿ16,Tv10 ಕನ್ನಡ

ಭ್ರೂಣ ಪತ್ತೆ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ವೈದ್ಯಕೀಯ ಪ್ರಮಾಣ ಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ ಜಡಿದಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಮೈಸೂರು ಜಿಲ್ಲೆಯಾದ್ಯಂತ ಕಾರ್ಯಾಚರಣೆ ಮುಂದುವರೆದಿದ್ದು
ಜಿಲ್ಲಾ ಟಾಸ್ಕ್‌ಪೋರ್ಸ್ ತಂಡದಿಂದ ಪರಿಶೀಲನೆ ನಡೆಯುತ್ತಿದೆ.
ಮೈಸೂರು ನಗರದ ವಿವಿಧ ಭಾಗಗಳ ನರ್ಸಿಂಗ್ ಹೋಂ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಪರಿಶೀಲನೆ ನಡೆಯುತ್ತಿದೆ.
ಸಮರ್ಪಕ ದಾಖಲಾತಿ ಇಲ್ಲದ ಕ್ಲಿನಿಕ್‌ಗಳಿಗೆ ನೋಟಿಸ್ ನೀಡಲಾಗುತ್ತಿದೆ…