ಹುಣಸೂರು:ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ವ್ಯಕ್ತಿ ಭೀಕರ ಕೊಲೆ…
- Crime
- December 20, 2023
- No Comment
- 461

ಹುಣಸೂರು,ಡಿ20,Tv10 ಕನ್ನಡ
ಸಿಮೆಂಟ್ ಇಟ್ಟಿಗೆಯಿಂದ ವ್ಯಕ್ತಿಯ ತಲೆಯನ್ನ ಜಜ್ಜಿ ಭೀಕರವಾಗಿ ಕೊಂದಿರುವ ಘಟನೆ ಹುಣಸೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸುಮಾರು 30 ವರ್ಷದ ವ್ಯಕ್ತಿಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯನ್ನ ಎತ್ತಿಹಾಕಿ ಕೊಲೆ ಮಾಡಲಾಗಿದೆ.ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ ಇರುವ ಸಿಮೆಂಟ್ ಇಟ್ಟಿಗೆ ತಯಾರಿಸುವ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಡಿವೈಎಸ್ಪಿ ಗೋಪಾಲಕೃಷ್ಣ,ಹುಣಸೂರು ಟೌನ್ ಇನ್ಸ್ಪೆಕ್ಟರ್ ದೇವೇಂದ್ರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆಯಾದ ವ್ಯಕ್ತಿಯಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.ಸಮೀಪದಲ್ಲಿರುವ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.ಹಂತಕರ ಪತ್ತೆಗೂ ಹುಣಸೂರು ಪೊಲೀಸರು ಜಾಲ ಬೀಸಿದ್ದಾರೆ…