ಮೈಸೂರಿನಲ್ಲೂ ಒಂದು ಹನಿಟ್ರಾಪ್…ಕೇರಳಾ ಉದ್ಯಮಿಗೆ ಬ್ಲಾಕ್ ಮೇಲ್…ಮೂವರು ಅಂದರ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • December 28, 2023
  • No Comment
  • 991

ಮೈಸೂರು,ಡಿ28,Tv10 ಕನ್ನಡ

ಕೇರಳಾ ಉದ್ಯಮಿಯೊಬ್ಬರನ್ನ ಬಲವಂತವಾಗಿ ಎಳೆದೊಯ್ದು ಮಹಿಳೆಯ ಜೊತೆ ನಗ್ನವಾಗಿ ಮಲಗಿರುವಂತೆ ಫೋಟೋ ತೆಗೆದು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಸುಮಾರು 9 ತಿಂಗಳ ಹಿಂದೆ ನಡೆದ ಘಟನೆಯನ್ನ ಬೆನ್ನತ್ತಿದ ಗ್ರಾಮಾಂತರ ಪೊಲೀಸರು ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನ ಸೆರೆಹಿಡಿದು ಜೈಲಿಗಟ್ಟಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಫಜಲುಲ್ಲಾ ರೆಹಮಾನ್,ರಿಜ್ವಾನ್ ಹಾಗೂ ಮೋನಾ(ಹೆಸರು ಬದಲಿಸಲಾಗಿದೆ) ಬಂಧಿತ ಆರೋಪಿಗಳು.ಕೇರಳಾ ರಾಜ್ಯದ ತಿರುನೆಲ್ಲಿಯ ಉದ್ಯಮಿ ಸುನ್ನಿ ಎಂಬುವರನ್ನ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಸುನ್ನಿ ರವರು ಚೆನ್ನೈನಿಂದ ಹಿಂದಿರುಗಿ ಮೈಸೂರು ಮೂಲಕ ತಮ್ಮ ಕಾರಿನಲ್ಲಿ ಕೇರಳಾ ಗೆ ತೆರಳುತ್ತಿದ್ದ ವೇಳೆ ಮಾನಂದವಾಡಿ ರಸ್ತೆಯಲ್ಲಿ ಈ ಆರೋಪಿಗಳು ಅಡ್ಡಗಟ್ಟಿ ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದು ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋಗಳನ್ನ ಚಿತ್ರೀಕರಿಸಿದ್ದಾರೆ.ನಂತರ ಸುನ್ನಿ ರವರಿಗೆ ಫೋಟೋ ಹಾಗೂ ವಿಡಿಯೋಗಳನ್ನ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಹೆದರಿಸಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.ಗೌರವಕ್ಕೆ ಅಂಜಿದ ಸುನ್ನಿ 5 ಲಕ್ಷ ಪಾವತಿಸಿದ್ದಾರೆ.ಅಲ್ಲದೆ ಸುನ್ನಿ ರವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.ನಡೆದ ಘಟನೆಯನ್ನ ಸುನ್ನಿರವರು ತಿರುನೆಲ್ಲಿ ಠಾಣೆ ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನಲೆ ಪ್ರಕರಣ ವರ್ಗಾವಣೆ ಆಗಿದೆ.ಪ್ರಕರಣದ ತನಿಖೆ ಕೈಗೊಂಡ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಬೆನ್ನತ್ತಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ 50 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರ್ ವಶಪಡಿಸಿಕೊಂಡಿದ್ದಾರೆ.ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ…

ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಶೇಖರ್ ನೇತೃತ್ವದಲ್ಲಿ ಪಿಎಸ್ಸೈ ಚಂದ್ರ ಹಾಗೂ ಸಿಬ್ಬಂದಿಗಳಾದ ಮಹೇಶ್,ರವಿ,ಸುನಿಲ್ ಕುಮಾರ್ ರವರು ಆರೋಪಿಗಳ ಸೆರೆ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *