ಮತ ಮನುಜ ಮತವಾಗಲಿ ಪಥ ವಿಶ್ವಪಥವಾಗಲಿ – ರಾಮಪ್ರಸಾದ್.


ಪ್ರಸ್ತುತ ಸಮಾಜದಲ್ಲಿ ಇಂದು ಮತ ಮತ್ತು ಪಥದ ಅರಿವು ಹೆಚ್ಚು ಅವಶ್ಯಕ . ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಆದರ್ಶಗಳು ಸರ್ವಕಾಲಿಕ. ಕುವೆಂಪುರವರ ವಿಶ್ವಮಾನವ ಸಂದೇಶವು ಇಂದು ಎಲ್ಲ ಮಾನವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ರಾಮ್ ಪ್ರಸಾದ್ ರವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ವಿಶ್ವಮಾನವ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು. ಬುದ್ಧ ಬಸವಣ್ಣನವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಮಹಾರಾತ್ರಿ ನಾಟಕದಲ್ಲಿ ಬುದ್ಧರಾಗುವ ಹಾದಿಯತ್ತ ಹೊರಟ ಸಿದ್ದಾರ್ಥನಿಗೆ ಕಾಣಿಸಿದ ಚೆನ್ನ ನ ನಿದ್ರೆ ಮತ್ತು ಮಹರಾತ್ರಿಯ ದ್ವನಿಯನ್ನು ಕುವೆಂಪುರವರ ದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವರ್ಣಿಸಿದರು .

ವಿಶೇಷ ಉಪನ್ಯಾಸ ನೀಡಿದ ಕನ್ನಡ ಉಪನ್ಯಾಸಕರಾದ ಡಾ. ಮಾಲತಿ ಕೆ ರವರು ವಿಶ್ವಮಾನವ ಸಂದೇಶವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಆಂಗ್ಲ ಭಾಷೆಯ ಉಪನ್ಯಾಸಕರಾದ ಶ್ರೀರಂಗಸ್ವಾಮಿ ರವರು ರವಿಂದ್ರನಾಥ್ ಠಾಗೂರ್ ರವರ ಗೀತಾಂಜಲಿಯ ಪ್ರಭಾವ ಕುವೆಂಪುರವರ ಮೇಲೆ ಪ್ರಭಾವ ಬೀರುವ ಮೂಲಕ ಅವರ ಅಪ್ರತಿಮ ಸಾಧನೆಗೆ ಕಾರಣವಾಯಿತು ಎಂದು ಹೇಳಿದರು . ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಶ್ವಥ್ ನಾರಾಯಣಗೌಡ,ಜುಡಿತ್ ಲಿಂಗನಸ್ವಾಮಿ ,ಸ್ವಾಮಿ ಗೌಡ ನಾಗರಾಜು, ಮೀನಾ ,ಡಾ ಟಿ ಕೆ ರವಿ, ಸುಮಿತ್ರ ,ಹರೀಶ್, ಮಲ್ಲಿಕಾರ್ಜುನ್ ಮುಂತಾದವರು ಉಪಸ್ಥಿತರಿದ್ದರು ವಿದ್ಯಾರ್ಥಿಗಳು ಐದು ಗೀತ ಗಾಯನವನ್ನು ಹಾಡಿದರು . ಮಾನಸ ಸ್ವಾಗತ, ಸಫಾರೋಶನ್ ವಂದನೆ ರಮ್ಯ ಸಿ ಕಾರ್ಯಕ್ರಮವನ್ನು ನಿರೂಪಿಸಿದರು .

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *