ಹೊಸವರ್ಷಾಚರಣೆ…ಟೂರಿಸ್ಟ್ ಗಳ ಜೊತೆ ಸೌಜನ್ಯದಿಂದ ವರ್ತಿಸಿ…ಆಟೋಚಾಲಕರಿಗೆ ಖಾಕಿ ಎಚ್ಚರಿಕೆ…

ಮೈಸೂರು,ಡಿ29,Tv10 ಕನ್ನಡ

ಹೊಸವರ್ಷಾಚರಣೆ ಹಿನ್ನಲೆ ಆಟೋ ಚಾಲಕರಿಗೆ ಇಂದು ಮೈಸೂರು ನಗರ ಪೊಲೀಸರು ಪ್ರವಾಸಿಗರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಆಟೋ ಚಾಲಕರಿಗೆ ಕಿವಿಮಾತು

ಹೇಳಿದರು.ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೈಸೂರಿನ ಪುರಭವನದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಪ್ರವಾಸಿ ಕೇಂದ್ರವಾದ ಸಾಂಸ್ಕೃತಿಕ ನಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.ಈ ವೇಳೆ ಯಾವುದೇ ರೀತಿ ತೊಂದರೆ ಆಗದಂತೆ ಎಚ್ಚರಿಕೆಯಿಂದ ವರ್ತಿಸಬೇಕೆಂದು ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಸಲಹೆ ನೀಡಿದರು.ಅವಸರದಲ್ಲಿ ಪ್ರಯಾಣಿಕರು ಪದಾರ್ಥಗಳನ್ನ ಆಟೋದಲ್ಲಿ ಮರೆತರೆ ಪೊಲೀಸ್ ಠಾಣೆಗೆ ಒಪ್ಪಿಸುವಂತೆ ಮನವಿ ಮಾಡಿದರು.ಪ್ರಾಮಾಣಿಕತೆ ಮರೆವ ಚಾಲಕರಿಗೆ ಬಹುಮಾನ ನೀಡಲಾಗುವುದೆಂದು ತಿಳಿಸಿದರು.ಆಟೋ ಚಾಲನೆ ಮಾಡುವಾಗ ಸಮವಸ್ತ್ರ ಧರಿಸುವುದು,ಮೀಟರ್ ಬಳಸುವುದು ಸೇರಿದಂತೆ ಸಂಚಾರಿ ನಿಯಮಗಳನ್ನ ಪಾಲಿಸುವಂತೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಪ್ರಸಾದ್,ದೇವರಾಜ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್,ಆಲನಹಳ್ಳಿ ಠಾಣೆ ಇನ್ಸ್ಪೆಕ್ಟರ್ ಶ್ರೀಕಾಂತ್ ಹಾಗೂ ಪಿಎಸ್ಸೈ ಗಳಾದ ಆನಂದ್,ಜೈಕೀರ್ತಿ,ಪ್ರಭು ಭಾಗವಹಿಸಿ ಆಟೋ ಚಾಲಕರಿಗೆ ಸಲಹೆ ನೀಡಿದರು.

ನಗರ ಪೊಲೀಸ್ ಆಯುಕ್ತ ಡಾ
ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ರವತ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *