ಸೇವೆ ಸಲ್ಲಿಸುತ್ತಿದ್ದ ವೃದ್ದೆಯ ಚಿನ್ನದ ಸರ ಲಪಟಾಯಿಸಿದ ಹೋಂ ನರ್ಸ್…48 ಗಂಟೆಗಳಲ್ಲಿ ಆರೋಪಿ ಅಂದರ್…

  • Crime
  • December 30, 2023
  • No Comment
  • 522

ಮೈಸೂರು,ಡಿ30,Tv10 ಕನ್ನಡ

ಹಾಸಿಗೆ ಹಿಡಿದ ವೃದ್ದೆಗೆ ಸೇವೆ ಸಲ್ಲಿಸುತ್ತಿದ್ದ ಹೋಂ ನರ್ಸ್ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾದ ಕೇವಲ 48 ಗಂಟೆಗಳಲ್ಲಿ ಸಿಕ್ಕಿಬಿದ್ದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವೇದಿತಾ ನಗರದಲ್ಲಿ ಬೆಳಕಿಗೆ ಬಂದಿದೆ.ಆಶಾ(31) ಬಂಧಿತ ಆರೋಪಿ.ನಿವೇದಿತಾ ನಗರದ ನರಸಿಂಹಶೆಟ್ಟಿ ರವರ ಪತ್ನಿ ಸಾವಿತ್ರಿ(70) ಹಾಸಿಗೆ ಹಿಡಿದಿರುವ ವೃದ್ದೆ.ಇವರ ಪಾಲನೆಗಾಗಿ ಬೋಗಾದಿ ನಿವಾಸಿ ಆಶಾರನ್ನ ಹೋಂ ನರ್ಸ್ ಆಗಿ ಏಜೆನ್ಸ್ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು.ಸುಮಾರು 15 ದಿನಗಳ ಕಾಲ ಸೇವೆ ಮಾಡಿದ ಆಶಾ ಎರಡು ದಿನಗಳ ಹಿಂದೆ ಸಾವಿತ್ರಿ ರವರು ಧರಿಸಿದ್ದ 60 ಗ್ರಾಂ ತೂಕದ ಚಿನ್ನದ ಸರ ಲಪಟಾಯಿಸಿ ಪರಾರಿಯಾಗಿದ್ದಳು.ಮೊಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಸ್ವಿಚ್ ಆಫ್ ಬಂದಿತ್ತು.ಕೂಡಲೇ ನರಸಿಂಹಶೆಟ್ಟಿ ರವರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಆಶಾ ವಿರುದ್ದ ಪ್ರಕರಣ ದಾಖಲಿಸಿದ್ದರು.ಕಾರ್ಯಾಚರಣೆ ನಡೆಸಿದ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಮಹಿಳಾ ಪಿಎಸ್ಸೈ ಲತಾ ರವರು ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಸೆರೆಹಿಡಿದು ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.ಈ ಸಂಭಂಧ ಸರಸ್ವವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *