ಟಿ.ನರಸೀಪುರ ತಾಲೂಕಿನಲ್ಲಿ ನಿರ್ಮಾಣವಾಗಲಿದೆ ಕ್ರೀಡಾಂಗಣ…ಕ್ರೀಡಾ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ…
- TV10 Kannada Exclusive
- January 2, 2024
- No Comment
- 259
ಮೈಸೂರು,ಜ1,Tv10 ಕನ್ನಡ
ವರುಣಾ ವಿಧಾನಸಭಾ ಕ್ಷೇತ್ರದ ಟಿ.ನರಸೀಪುರ ತಾಲೂಕಿನಲ್ಲಿ ನೂತನವಾಗಿ ಕ್ರೀಡಾಂಗಣ ಅಸ್ತಿತ್ವಕ್ಕೆ ಬರಲಿದೆ.ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಹಾಗೂ ವರುಣಾ ಕ್ಷೇತ್ರದ ಶಾಸಕರೂ ಆದ ಸಿದ್ದರಾಮಯ್ಯನವರು ಯವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಬಿ.ನಾಗೇಂದ್ರ ರವರಿಗೆ ಪತ್ರ ಬರೆದಿದ್ದಾರೆ.ಟಿ.ನರಸೀಪುರ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜು ವಿಧ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕ್ರೀಡಾಂಗಣ ಇಲ್ಲದೆ ತೊಂದರೆಯಾಗಿದೆ.ಈ ಹಿನ್ನಲೆ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ…