ಕೋಳಿ ತೂಕದಲ್ಲಿ ಫಾರಂ ಮಾಲೀಕನಿಗೆ ವಂಚನೆ…ಮರಕ್ಕೆ ಕಟ್ಟಿಹಾಕಿ ಬೆಂಡ್ ಎತ್ತಿದ ರೈತ…

  • Crime
  • January 2, 2024
  • No Comment
  • 447

ಪಾಂಡವಪುರ,ಜ2,Tv10 ಕನ್ನಡ

ತೂಕದಲ್ಲಿ ಕೋಳಿಫಾರಂ ಮಾಲೀಕನಿಗೆ ಮೋಸ ಮಾಡಿದ ಖರೀದಿದಾರನಿಗೆ ರೈತ ಕಂಬಕ್ಕೆ ಕಟ್ಟಿ ಬೆಂಡ್ ಎತ್ತಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಮಾಂಸದ ಕೋಳಿ ತುಂಬುವಾಗ ರೈತನಿಗೆ
ಮೋಸ ಮಾಡಲು ಯತ್ನಿಸಿದವರನ್ನು ಮರಕ್ಕೆ ಕಟ್ಟಿ ಹಾಕಿ ಬುದ್ದಿವಾದ ಹೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ರೈತ ಹನುಮಂತೇಗೌಡರಿಗೆ ಇಂತಹ ಕಹಿ ಘಟನೆ ನಡೆದಿದೆ.ತಮ್ಮ ಕೋಳಿ ಫಾರಂನಲ್ಲಿ ಸಾಕಿದ್ದ ಕೋಳಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು.
ಮೈಸೂರು ಮೂಲದ NR ಚಿಕನ್ ಕಂಪನಿಯವರು ಈ ರೈತನ ಬಳಿ ಕೋಳಿಯನ್ನು ಕೊಂಡು ಕೊಳ್ಳುತ್ತಿದ್ದರು.
ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡುತ್ತಿದ್ದರು.
ಇಂದು ಕೋಳಿ ತುಂಬುವಾಗ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ.ಈ ವೇಳೆ ಒಂದು ತೂಕದಲ್ಲಿ ರೈತನಿಗೆ ಸುಮಾರು 30 KG ತೂಕದಲ್ಲಿ ವ್ಯತ್ಯಾಸ ಬಂದಿದೆ.
ಇದರಿಂದ ರೊಚ್ಚಿಗೆದ್ದ ರೈತ ಹನುಮಂತೇಗೌಡ
ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಮರಕ್ಕೆ ಕಟ್ಟಿಹಾಕಿದ್ದಾರೆ.
ತೂಕದಲ್ಲಿ ಮೋಸ ಮಾಡಿ ಇದುವರೆಗೂ ವಂಚಿಸಿದ ಇವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *