ಮೈಸೂರು:ಶಾರದಾದೇವಿ ಜಯಂತಿ ಆಚರಣೆ…ಶಾರದಾಮಾತೆ ಪ್ರತಿಮೆ ಸ್ಥಾಪನೆಗೆ ಒತ್ತಾಯ…

ಮೈಸೂರು,ಜ3,Tv10 ಕನ್ನಡ

ಮೈಸೂರಿನ ಶಾರದಾ ದೇವಿ ನಗರ ವೃತ್ತದಲ್ಲಿ ಶ್ರೀ ಶಾರದಾದೇವಿ 171ನೇ ಜಯಂತಿಯನ್ನ ಆಚರಿಸಲಾಯಿತು. ಆಧ್ಯಾತ್ಮಿಕ ಲೋಕ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಮಾತೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಿಹಿ ವಿತರಿಸಲಾಯಿತು. ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ತಮ್ಮ ಸಾಧನೆ, ತ್ಯಾಗ ಮತ್ತು ಪರಿಶ್ರಮದಿಂದ ಶ್ರೀ ರಾಮಕೃಷ್ಣ ಪರಮಹಂಸರು ಹಾಗೂ ವೀರಸನ್ಯಾಸಿ ಸ್ವಾಮಿ ವಿವೇಕಾನಂದರನ್ನು ಆಧ್ಯಾತ್ಮಿಕವಾಗಿ ಬೆಳೆಸಿದ ಮಹಾನ್‌ ಶಕ್ತಿ ಶ್ರೀ ಶಾರದಾದೇವಿಯವರು ಎಂದು ಬಣ್ಣಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಬಿ ಎಂ ರಘು ಮಾತನಾಡಿ
ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿಯೂ ಶಾರದಾಮಾತೆಯ ಪ್ರತಿಮೆ ನಿರ್ಮಾಣವಾಗಬೇಕು ತನ್ಮೂಲಕ ಮೂವರು ಮಹನೀಯರನ್ನು ಕೊಡುಗೆಯನ್ನು ಶಾಶ್ವತವಾಗಿ ನೆನೆಯುವ ಕೆಲಸವಾಗುತ್ತದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ,
ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸ್ಥಳೀಯ ಮುಖಂಡರಾದ ಎಚ್ ಜಿ ರಾಜಮಣಿ, ಶ್ರೀಧರ್ ಶರ್ಮ, ವಿಜೇಂದ್ರ, ರಾಜಕುಮಾರ್ ಕಾಮತ್, ಪಾಂಡುರಂಗ ಶೆಟ್ಟಿ, ರವಿ ಅರಸ್, ವಿನುತಾ, ಹೇಮಲತಾ, ರಾಧಾ ಮುತಾಲಿಕ್, ಸುಮಾ ಪ್ರಾಣೇಶ್, ರಮಾಬಾಯಿ, ಮಂಜುಳ ,ನೇತ್ರಾವತಿ,ರಮೇಶ್, ತುಳಸಿ,
ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *