ಉಪತಹಸೀಲ್ದಾರ್ ಕಿರುಕುಳ ಆರೋಪ…ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

  • Crime
  • January 7, 2024
  • No Comment
  • 2584
ಡೆತ್ ನೋಟ್

ನಂಜನಗೂಡು,ಜ8,Tv10 ಕನ್ನಡ

ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಉಪತಹಸೀಲ್ದಾರ್ ಶಿವಕುಮಾರ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್ ನೋಟ್ ಬರೆದು ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಪರಮೇಶ್ ರನ್ನ ಮೈಸೂರಿನ ಕೆ.ರ್.ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದಾರೆ.ಭಾನುವಾರವಾದ ಇಂದೂ ಸಹ ಪರಮೇಶ್ ಗೆ ನಾಎಕಚೇರಿಯಲ್ಲಿ ಕೆಲಸ ಮಾಡುವಂತೆ ತಾಕೀತು ಮಾಡಲಾಗಿದೆ.ಏಪ್ರಿಲ್ ನಿಂದ ವೇತನ ಬಂದಿಲ್ಲ.ಕುಟುಂಬ ನಿರ್ವಹಣೆಗೆ ಸಮಸ್ಯೆ ಆಗಿದೆ.ವಿಕಲಚೇತನನಾಗಿದ್ದರೂ ಕನಿಕರ ತೋರಿಸದೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ.ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *