ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ…ಜಿಲ್ಲಾಧಿಕಾರು ಡಾ.ಡಿ.ವಿ.ರಾಜೇಂದ್ರ ರಿಂದ ಚಾಲನೆ…

ಮೈಸೂರು,ಜ8,Tv10 ಕನ್ನಡ

ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಹಿನ್ನಲೆ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಳ ಕಚೇರಿ ವತಿಯಿಂದ ವಿದ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಚಾಲನೆ ನೀಡಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ‘ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಾದ್ಯಂತ ಈ ಕಾರ್ಯ ನಡೆಯಲಿದೆ. ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್, ಚುನಾವಣಾ ಶಿರಸ್ತೇದಾರ್ ಸುರೇಶ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *