ವಿದ್ಯುತ್ ಅವಘಢ ಪ್ರಕರಣ…ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ…ಸಿಎಂ ಸಿದ್ದರಾಮಯ್ಯ ರಿಂದ ಘೋಷಣೆ…
- Crime
- January 8, 2024
- No Comment
- 139
ಗದಗ,ಜ8,Tv10 ಕನ್ನಡ
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಚಿತ್ರನಟ ಯಶ್ ಅವರ ಜನ್ಮದಿನದ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಷಿಸಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ಹಾಗೂ ಗಾಯಗೊಂಡ ಯುವಕರ ಚಿಕಿತ್ಸೆಗಾಗಿ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ…