ಗ್ರಾ.ಪಂ.ಅನುದಾನ ಹಣ ದುರ್ಬಳಕೆ ಪ್ರಕರಣ…ಪಿಡಿಓ ತಲೆದಂಡ…ಸಸ್ಪೆಂಡ್ ಆದೇಶ…Tv10 ವರದಿ ಫಲಶೃತಿ…
- TV10 Kannada Exclusive
- January 9, 2024
- No Comment
- 709
ದೊಡ್ಡಕವಲಂದೆ ಗ್ರಾ.ಪಂ ಯಲ್ಲಿ ಅನುದಾನ ದುರ್ಬಳಕೆ ಆಗಿರುವ ಪ್ರಕರಣಕ್ಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಪಿಡಿಓ ಸಸ್ಪೆಂಡ್ ಮಾಡಿದ್ದಾರೆ. ಶೌಚಾಲಯ ನಿರ್ಮಿಸದೆ ಹಣ ಗುಳುಂ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಪಿಡಿಓ ಪುರುಷೋತ್ತಮ್ ರನ್ನ ಅಮಾನತು ಪಡಿಸಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿನ್ಸ್ ಆದೇಶ ಹೊರಡಿಸಿದ್ದಾರೆ.
ಇದುTv10 ವರದಿ ಇಂಪ್ಯಾಕ್ಟ್
ಕೆಲವು ದಿನಗಳ ಹಿಂದೆ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಯಲ್ಲಿ ಶೌಚಾಲಯ ನಿರ್ಮಿಸದೆ ಅನುದಾನ್ ಹಣ ಗುಳುಂ ಮಾಡಿದ್ದಾರೆ ಎಂದು ವರದಿ ಪ್ರಸಾರ ಮಾಡಲಾಗಿತ್ತು. ಈ ಬಗ್ಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಹಾಗೂ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಗಟ್ಟವಾಡಿ ಮಹೇಶ್ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ
ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಅಧಿಕಾರಿಗಳನ್ನು ಒಳಗೊಂಡಂತೆ ತಂಡ ರಚನೆ ಮಾಡಿ ತನಿಖೆಯನ್ನು ನಡೆಸಲಾಯಿತು.
ತನಿಖೆಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದೆ. 2020-21ನೇ ಸಾಲಿನಿಂದ 2022-23ನೇ ಸಾಲಿನವರೆಗೆ 8,73,796 ಲಕ್ಷ ರೂ.ಗಳನ್ನು ನಿಯಮ ಬಾಹಿರವಾಗಿ ಬಿಲ್ ಕಲೆಕ್ಟರ್ ಪಿ.ಸೋಮಣ್ಣ ಅವರ ಖಾತೆಗೆ ವರ್ಗಾಯಿಸಲಾಗಿದೆ. ಮೂರು ಅಂಗನವಾಡಿಗಳ ಕಟ್ಟಡ ಹಾಗೂ ಸರ್ಕಾರಿ ಕನ್ನಡ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡದೆ ಬಿಲ್ ಮಾಡಿಕೊಂಡು 13.37 ಲಕ್ಷ ರೂ.ಗಳನ್ನು ದುರುಪಯೋಗ ಮಾಡಿಕೊಂಡಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಿರುವ 6.08 ಲಕ್ಷ ಅನುದಾನ, ಹಾಗೂ ಜಿಲ್ಲಾ ಪಂಚಾಯಿತಿಯಿಂದ ಬಿಡುಗಡೆಯಾಗಿದ್ದ 8 ಲಕ್ಷ ಗಳನ್ನು ಸ್ವಂತ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು. 13.30.868 ರೂ.ಗಳನ್ನು ಅಂಗನವಾಡಿ ಕಟ್ಟಡ ಮತ್ತು ಶಾಲಾ ಕಾಲೇಜುಗಳ ಶೌಚಾಲಯಗಳನ್ನು ನಿರ್ಮಾಣ ಮಾಡದೆ ಅನ್ಯ ಉದ್ದೇಶಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಂಡಿರುವುದು ದಾಖಲೆಯಲ್ಲಿ ತಿಳಿದು ಬಂದಿದೆ. ಹಾಲಿ ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಮಕಂದೂರು ಗ್ರಾಮ ಪಂಚಾಯಿತಿಯಲ್ಲಿ ಪಿರುಷೋತ್ತಮ್ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪುರುಷೋತ್ತಮ್ ವಿರುದ್ಧ ತನಿಖೆ ನಡೆಸಿ ಒಟ್ಟು 26.45 ಲಕ್ಷ ರೂ. ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವುದು ಹಾಗೂ ಬಿಲ್ ಕಲೆಕ್ಟರ್ ಬಿ ಸೋಮಣ್ಣ ಎಂಬುವವರ ಖಾತೆಗೆ ಹಣವನ್ನು ವರ್ಗಾಯಿಸಿರುವುದು ತನಿಖೆಯಲ್ಲಿ ಸಾಬೀತಾಗಿದೆ.ಈ ಹಿನ್ನಲೆ ಪುರುಷೋತ್ತಮ್ ಎಂಬುವವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ…