ಸಿಸಿಬಿ ಪೊಲೀಸರ ಕಾರ್ಯಾಚರಣೆ..4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶ…

ಮೈಸೂರು,ಜ9,Tv10 ಕನ್ನಡ

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ.ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ ಹೆಬ್ಬಾಳ್ ನಲ್ಲಿರುವ ಕೆ.ಎಫ್.ಸಿ.ಐ.ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.KA 09 D 9686 ನೊಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನನ್ನೂ ಸಹ ವಶಕ್ಕೆ ಪಡೆದಿದ್ದಾರೆ.ಸಧ್ಯ ವಶಪಡಿಸಿಕೊಳ್ಳಲಾದ ಅಕ್ಕಿ,ಲಾರಿ ಹಾಗೂ ಚಾಲಕನನ್ನ ಮೇಟಗಳ್ಳಿ ಪೊಲೀಸರ ವಶಕ್ಕೆ ನೀಡಲಾಗಿದೆ.ಸ್ಥಳಕ್ಕೆ ಆಹಾರ ನಿರೀಕ್ಷಕರಾದ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ಪೆಕ್ಟರ್ ಶಬರೀಶ್ ರವರು ಆರೋಪಿಯನ್ನ ವಿಚಾರಣೆಗೆ ಒಳಪಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿರವರಾದ ಮುತ್ತುರಾಜ್,ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಪೂವಯ್ಯ, ಪಿಎಸ್ಸೈ ಲೇಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.. .

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *