ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ನೋ ಎಂಟ್ರಿ…ಕೇಂದ್ರದ ವಿರುದ್ದ ಜಿಲ್ಲಾ ಉಸ್ತುವಾರಿ ಗರಂ…

  • Politics
  • January 11, 2024
  • No Comment
  • 319

ಮೈಸೂರು,ಜ11,Tv10 ಕನ್ನಡ

ಪ್ರಸಕ್ತ ವರ್ಷದ ಗಣ ರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ಸಿಗದ ಹಿನ್ನಲೆ
ಕೇಂದ್ರದ ವಿರುದ್ಧ ಸಚಿವ ಡಾ ಎಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಸ್ಥಬ್ದ ಚಿತ್ರಗಳಿಗೆ ಪ್ರಾತಿನಿಧ್ಯವನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರವು ಗಣತಂತ್ರ ವ್ಯವಸ್ಥೆಗೆ ಅಪಚಾರ ಎಸಗಿದೆ.ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಹಣ ಸಂಗ್ರಹಿಸುವುದನ್ನು ಬಿಟ್ಟರೆ ಇವರಿಂದ ರಾಜ್ಯಕ್ಕೆ ಕಿಂಚಿತ್ ಸಹಕಾರ ಇಲ್ಲ.
ಇವರು ತೆರಿಗೆ ಹಣದ ಪಾಲನ್ನು ಕೇಳಿದರೆ ಕೊಡುವುದಿಲ್ಲ.ಬರ ಪರಿಹಾರ ಕೇಳಿದರೆ ಜಾಣ ಕುರುಡು ಪ್ರದರ್ಶಿಸುತ್ತಾರೆ.
ಬಡವರ ಹಸಿವಿಗೆ ಬೇಕಾದ ಅನ್ನಭಾಗ್ಯ ಅಕ್ಕಿ ವಿಚಾರ
ಅದನ್ನು ಕೊಂಡುಕೊಳ್ಳಲು ಕೇಳಿದರೆ ಸಾರ್ವಜನಿಕರಿಗೆ ಸೇರಿದ ಕೇಂದ್ರ ಆಹಾರ ನಿಗಮವು ಇವರ ಸ್ವಯಂ ಆಸ್ತಿಯೇನೋ ಎಂಬಂತೆ ವರ್ತಿಸುತ್ತಾರೆ.
ಒಟ್ಟಿನಲ್ಲಿ ಚುನಾವಣಾ ಸೋಲಿಗೆ ಸೇಡು ತೀರಿಸಿಕೊಳ್ಳುವಂತೆ ಕೇಂದ್ರವು ವರ್ತಿಸುತ್ತಿದೆ.
ಇವರ ವರ್ತನೆಯು ನಿಜಕ್ಕೂ ಗಣತಂತ್ರ ವ್ಯವಸ್ಥೆಯ ಒಳಗೆ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು
ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಾ ಎಚ್ ಸಿ ಮಹದೇವಪ್ಪ ಕಿಡಿ ಕಾರಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *